AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ವಿರಾಟ್ ಕೊಹ್ಲಿಯ ವಿಶೇಷ ದಾಖಲೆ ಸರಿಗಟ್ಟಿದ ಯಶಸ್ವಿ ಜೈಸ್ವಾಲ್

India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ದ್ವಿತೀಯ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (104) ಅವರ ಶತಕ ಹಾಗೂ ಶುಭ್​ಮನ್ ಗಿಲ್ (65) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡವು 2 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿದೆ. ಈ ಮೂಲಕ 322 ರನ್​ಗಳ ಮುನ್ನಡೆ ಸಾಧಿಸಿದೆ.

TV9 Web
| Edited By: |

Updated on:Feb 18, 2024 | 2:22 PM

Share
ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಪ್ರವಾಸಿ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು.

1 / 7
ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿಸಿದ ಯಶಸ್ವಿ 50 ರನ್​ಗಳಿಸಲು 80 ಎಸೆತಗಳನ್ನು ಎದುರಿಸಿದ್ದರು. ಆದರೆ ಅರ್ಧಶತಕ ಪೂರೈಸುತ್ತಿದ್ದಂತೆ ಬ್ಯಾಟಿಂಗ್ ಗೇರ್ ಬದಲಿಸಿ ಯಶಸ್ವಿ ಇಂಗ್ಲೆಂಡ್ ಬೌಲರ್​ಗಳ ಬೆಂಡತ್ತಲು ಆರಂಭಿಸಿದರು. ಪರಿಣಾಮ ಮೈದಾನದ ಮೂಲೆ ಮೂಲೆಗೆ ಸಿಕ್ಸ್​-ಫೋರ್​ಗಳ ಸುರಿಮಳೆಯಾಯಿತು.

2 / 7
ಈ ಸಿಕ್ಸ್​-ಫೋರ್​ಗಳೊಂದಿಗೆ ಯಶಸ್ವಿ ಜೈಸ್ವಾಲ್ ಕೇವಲ 122 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಈ ಶತಕದೊಂದಿಗೆ ಯುವ ಎಡಗೈ ದಾಂಡಿಗ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಅಬ್ಬರಿಸುವ ಮೂಲಕ ಎಂಬುದು ವಿಶೇಷ.

3 / 7
ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಪ್ರಸ್ತುತ ಸರಣಿಯಲ್ಲಿ ಒಟ್ಟು 435* ರನ್ ಗಳಿಸಿದ್ದಾರೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿವೊಂದರಲ್ಲಿ 400+ ರನ್ ಕಲೆಹಾಕಿದ ವಿಶೇಷ ಸಾಧನೆ ಮಾಡಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಬಳಿಕ ಟೆಸ್ಟ್ ಸರಣಿಯೊಂದರಲ್ಲಿ ನಾನೂರಕ್ಕೂ ಅಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

4 / 7
ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಬರೆದಿದ್ದು ವಿರಾಟ್ ಕೊಹ್ಲಿ. 2018ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಿಂಗ್ ಕೊಹ್ಲಿ ಒಟ್ಟು 593 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದಾದ ಬಳಿಕ ಯಾವುದೇ ಬ್ಯಾಟರ್​ಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 400 ರನ್​ ಕಲೆಹಾಕಲು ಸಾಧ್ಯವಾಗಿರಲಿಲ್ಲ.

5 / 7
ಇದೀಗ 6 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ಯಶಸ್ವಿ ಜೈಸ್ವಾಲ್ 400+ ರನ್ ಕಲೆಹಾಕಿದ್ದಾರೆ. ಈ ಮೂಲಕ ಆಂಗ್ಲರ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಬಳಿಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ಬ್ಯಾಟ್ಸ್​​​ಮನ್ ಎಂಬ ವಿಶೇಷ ದಾಖಲೆಯೊಂದನ್ನು ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 133 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 104 ರನ್ ಬಾರಿಸಿದ್ದರು. ಈ ವೇಳೆ ಬೆನ್ನು ಸ್ನಾಯು ಸೆಳೆತಕ್ಕೆ ಒಳಗಾದ ಅವರು ರಿಟೈರ್ಡ್​ ಹರ್ಟ್ ತೆಗೆದುಕೊಂಡರು. ಹೀಗಾಗಿ ಅವರು ನಾಲ್ಕನೇ ದಿನದಾಟದಲ್ಲಿ ಮತ್ತೆ ಕಣಕ್ಕಿಳಿಯುವ ಸಾಧ್ಯತೆಯಿದೆ.

7 / 7

Published On - 7:41 am, Sun, 18 February 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ