AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಯಶಸ್ವಿ ಜೈಸ್ವಾಲ್ ಟೆಸ್ಟ್ ಸರಣಿಯ ಸಿಕ್ಸರ್ ಕಿಂಗ್

Yashasvi Jaiswal Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸತತ ದ್ವಿಶತಕ ಬಾರಿಸುವ ಮೂಲಕ ಅಬ್ಬರಿಸಿರುವ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅದರಲ್ಲೂ ಒಂದೇ ಇನಿಂಗ್ಸ್​ನಲ್ಲಿ 12 ಸಿಕ್ಸ್ ಸಿಡಿಸಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಟೆಸ್ಟ್ ಸರಣಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 20, 2024 | 3:15 PM

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ವಿಶಾಖಪಟ್ಟಣಂ ಹಾಗೂ ರಾಜ್​ಕೋಟ್ ಟೆಸ್ಟ್ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಸಿಡಿಸಿ ಹೊಸ ಸಂಚಲನವನ್ನೇ ಸೃಷ್ಟಿಸಿದ್ದಾರೆ.

1 / 7
ಈ ಸಂಚಲನದೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್ ಸರಣಿಯ ಹೊಸ ಸಿಕ್ಸರ್ ಕಿಂಗ್ ಆಗಿ ಹೊರಹೊಮ್ಮಿದ್ದಾರೆ. ಅಂದರೆ ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ವಿಶ್ವ ದಾಖಲೆ ಇದೀಗ 22ರ ಹರೆಯದ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಹಿಟ್​ಮ್ಯಾನ್ ಖ್ಯಾತಿ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

2 / 7
2019 ರಲ್ಲಿ ರೋಹಿತ್ ಶರ್ಮಾ ಸೌತ್ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬರೋಬ್ಬರಿ 19 ಸಿಕ್ಸ್​ಗಳನ್ನು ಬಾರಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಟೀಮ್ ಇಂಡಿಯಾ ನಾಯಕನ ದಾಖಲೆಯನ್ನು ಸಹ ಆರಂಭಿಕ ಆಟಗಾರನೇ ಮುರಿದಿರುವುದು ವಿಶೇಷ.

3 / 7
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಇದುವರೆಗೆ 22 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ವರ್ಲ್ಡ್​ ರೆಕಾರ್ಡ್​ ಅನ್ನು ಯಶಸ್ವಿ ತನ್ನದಾಗಿಸಿಕೊಂಡಿದ್ದಾರೆ.

4 / 7
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್​ನ ಶಿಮ್ರಾನ್ ಹೆಟ್ಮೆಯರ್. 2019 ರಲ್ಲಿ ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೆಟ್ಮೆಯರ್ 15 ಸಿಕ್ಸ್ ಬಾರಿಸಿ ಅಬ್ಬರಿಸಿದ್ದರು.

5 / 7
ಹಾಗೆಯೇ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಒಟ್ಟು 15 ಸಿಕ್ಸ್​ಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು.

6 / 7
ಇದೀಗ ಈ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿರುವ ಯಶಸ್ವಿ ಜೈಸ್ವಾಲ್ ಟೆಸ್ಟ್ ಸರಣಿಯ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಮುಂದಿನ 2 ಪಂದ್ಯಗಳ ಮೂಲಕ ಈ ಸಿಕ್ಸ್​ಗಳ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವುದನ್ನು ನಿರೀಕ್ಷಿಸಬಹುದು.

7 / 7
Follow us
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ

ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ

ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ

ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ

ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ

ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ

ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ