Yashasvi Jaiswal: ಯಶಸ್ವಿ ಸಿಕ್ಸ್​ಗೆ ಸೆಹ್ವಾಗ್ ದಾಖಲೆ ಧೂಳೀಪಟ

| Updated By: ಝಾಹಿರ್ ಯೂಸುಫ್

Updated on: Feb 25, 2024 | 9:57 AM

Yashasvi Jaiswal: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 1 ಸಿಕ್ಸ್ ಬಾರಿಸುವ ಮೂಲಕ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 7
ಟೀಮ್ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ದ್ವಿಶತಕ ಬಾರಿಸಿದ ಇತಿಹಾಸ ನಿರ್ಮಿಸಿದ್ದ ಜೈಸ್ವಾಲ್ ಇದೀಗ ಸಿಕ್ಸ್ ಸಿಡಿಸಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಢಿದ್ದಾರೆ.

2 / 7
ರಾಂಚಿಯ ಜೆಎಸ್​ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೈಸ್ವಾಲ್ 73 ರನ್ ಬಾರಿಸಿ ಮಿಂಚಿದ್ದರು. ಈ ಭರ್ಜರಿ ಅರ್ಧಶತಕದಲ್ಲಿ ಒಂದು ಸಿಕ್ಸರ್ ಕೂಡ ಒಳಗೊಂಡಿತ್ತು. ವಿಶೇಷ ಎಂದರೆ ಈ ಸಿಕ್ಸ್​ನೊಂದಿಗೆ ಯಶಸ್ವಿ ಜೈಸ್ವಾಲ್ ಸಿಕ್ಸರ್  ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 7
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ವರ್ಷವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್​ನ ದಾಖಲೆ ಇದೀಗ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಿಡಿಲಬ್ಬರದ ಸಿಡಿಲಮರಿ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

4 / 7
2008 ರಲ್ಲಿ ವೀರೇಂದ್ರ ಸೆಹ್ವಾಗ್ ಟೆಸ್ಟ್​ ಕ್ರಿಕೆಟ್​ನಲ್ಲಿ ಒಟ್ಟು 22 ಸಿಕ್ಸ್ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು. ಇದಾದ ಬಳಿಕ 2022 ರಲ್ಲಿ ರಿಷಭ್ ಪಂತ್ 21 ಸಿಕ್ಸ್ ಬಾರಿಸಿದರೂ ಸೆಹ್ವಾಗ್ ದಾಖಲೆಯನ್ನು ಮುರಿಯಲು ಸಾಧ್ಯವಾಗಿರಲಿಲ್ಲ.

5 / 7
ಇದೀಗ 2024 ರಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 23* ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.

6 / 7
ಯಶಸ್ವಿ ಜೈಸ್ವಾಲ್ ಈ ದಾಖಲೆಯನ್ನು ಬರೆದಿರುವುದು ಕೇವಲ 7 ಇನಿಂಗ್ಸ್​ಗಳ ಮೂಲಕ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 4 ಪಂದ್ಯಗಳ ಮೂಲಕ ಯುವ ಎಡಗೈ ದಾಂಡಿಗ ಒಟ್ಟು 23 ಸಿಕ್ಸ್​ಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.

7 / 7
ಇನ್ನು ಟೆಸ್ಟ್ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಕೂಡ ಯಶಸ್ವಿ ಜೈಸ್ವಾಲ್ ಹೆಸರಿನಲ್ಲಿದೆ. ರಾಜ್​ಕೋಟ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 12 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಒಟ್ಟಿನಲ್ಲಿ ಟೆಸ್ಟ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಜೈಸ್ವಾಲ್ ಇದೀಗ ಸಿಕ್ಸ್​ಗಳೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

Published On - 9:53 am, Sun, 25 February 24