Duleep Trophy; ಒಂದಂಕಿಗೆ ಸುಸ್ತಾದ ಜೈಸ್ವಾಲ್; ಶ್ರೇಯಸ್​ ಅಯ್ಯರ್ ಕೂಡ ಫೇಲ್

Updated on: Sep 04, 2025 | 4:03 PM

Duleep Trophy 2025 Semi Final: ಏಷ್ಯಾಕಪ್ ತಂಡದಿಂದ ವಂಚಿತರಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರು ದುಲೀಪ್ ಟ್ರೋಫಿಯಲ್ಲಿ ನಿರಾಶಾದಾಯಕ ಆರಂಭವನ್ನು ಕಂಡಿದ್ದಾರೆ. ಪಶ್ಚಿಮ ವಲಯ ತಂಡದ ಪರ ಆಡಿದ ಅವರು ಕೇವಲ 4 ರನ್‌ಗಳಿಗೆ ಔಟ್ ಆದರು. ಶ್ರೇಯಸ್ ಅಯ್ಯರ್ ಕೂಡ ನಿರೀಕ್ಷೆಗೆ ತಕ್ಕಂತೆ ಆಡಲಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬರಿಂದಲೂ ಉತ್ತಮ ಪ್ರದರ್ಶನದ ನಿರೀಕ್ಷೆ ಇದೆ.

1 / 5
ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾದ ನಿರಾಶೆಯಲ್ಲಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂದಿನಿಂದ ಆರಂಭವಾಗಿರುವ ದುಲೀಪ್ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಪಶ್ಚಿಮ ವಲಯ ತಂಡದ ಪರ ಕಣಕ್ಕಿಳಿದಿದ್ದರು. ಆದರೆ ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಜೈಸ್ವಾಲ್​ಗೆ ಒಂದಂಕಿಯನ್ನೂ ದಾಟಲು ಸಾಧ್ಯವಾಗಲಿಲ್ಲ.

2 / 5
ದುಲೀಪ್ ಟ್ರೋಫಿಯ ಸೆಮಿಫೈನಲ್‌ ಪಂದ್ಯ ಪಶ್ಚಿಮ ವಲಯ ಹಾಗೂ ಕೇಂದ್ರ ವಲಯ ತಂಡಗಳ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಪಶ್ಚಿಮ ವಲಯ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 3 ಎಸೆತಗಳನ್ನು ಎದುರಿಸಿ 4 ರನ್ ಕಲೆಹಾಕಿ ಖಲೀಲ್ ಅಹ್ಮದ್ ಅವರ ಬೌಲಿಂಗ್​ನಲ್ಲಿ ಎಲ್ಬಿಡಬ್ಲ್ಯೂ ಔಟ್ ಆದರು.

3 / 5
ಬೆಂಗಳೂರಿನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ, ಶಾರ್ದೂಲ್ ಠಾಕೂರ್ ನಾಯಕತ್ವದ ಪಶ್ಚಿಮ ವಲಯ ತಂಡಕ್ಕೆ ಕೆಟ್ಟ ಆರಂಭ ಸಿಕ್ಕಿತು. ತಂಡದ ಇಬ್ಬರು ಆರಂಭಿಕರು 10 ರನ್‌ಗಳ ಒಳಗೆ ಪೆವಿಲಿಯನ್‌ಗೆ ಮರಳಿದರು. ಇಂಗ್ಲೆಂಡ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್ ಕೇವಲ 3 ಎಸೆತಗಳಲ್ಲಿ 4 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರೆ, ಮತ್ತೊಬ್ಬ ಆರಂಭಿಕ ಹಾರ್ವಿಕ್ ದೇಸಾಯಿ 1 ರನ್​ಗೆ ಔಟಾದರು.

4 / 5
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡಿದರು. ಈ ಪ್ರವಾಸದಲ್ಲಿ ಆಡಿದ 5 ಪಂದ್ಯಗಳ 10 ಇನ್ನಿಂಗ್ಸ್‌ಗಳಲ್ಲಿ 41.10 ಸರಾಸರಿಯಲ್ಲಿ 411 ರನ್ ಗಳಿಸಿದರು. ಇದರಲ್ಲಿ ಎರಡು ಶತಕಗಳು ಮತ್ತು ಎರಡು ಅರ್ಧಶತಕಗಳು ಸೇರಿವೆ. ಇದೀಗ ದುಲೀಪ್ ಟ್ರೋಫಿಯಲ್ಲಿಯೂ ಯಶಸ್ವಿ ಅವರಿಂದ ಇದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಿತ್ತು. ಆದರೆ ಮೊದಲ ಇನ್ನಿಂಗ್ಸ್​ನಲ್ಲಿ ಯಶಸ್ವಿ ಪ್ರದರ್ಶನ ಸಪ್ಪೆಯಾಗಿತ್ತು.

5 / 5
ಯಶಸ್ವಿ ಜೈಸ್ವಾಲ್ ಜೊತೆಗೆ ಏಷ್ಯಾಕಪ್ ತಂಡದಲ್ಲಿ ಸ್ಥಾನ ಸಿಗದ ಬೇಸರದಲ್ಲಿದ್ದ ಮತ್ತೊಬ್ಬ ಅನುಭವಿ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್​ ಕೂಡ ಮೊದಲ ಇನ್ನಿಂಗ್ಸ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ತಂಡದ ಪರ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಶ್ರೇಯಸ್ 28 ಎಸೆತಗಳಲ್ಲಿ 25 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದೀಗ ಎರಡನೇ ಇನ್ನಿಂಗ್ಸ್​ನಲ್ಲಿ ಇವರಿಬ್ಬರಿಂದ ದೊಡ್ಡ ಇನ್ನಿಂಗ್ಸ್​ನ ನಿರೀಕ್ಷೆ ಇಡಲಾಗಿದೆ.

Published On - 3:58 pm, Thu, 4 September 25