Yashasvi Jaiswal: ಜೈ ಹೋ ಜೈಸ್ವಾಲ್: ಭರ್ಜರಿ ದ್ವಿಶತಕ ಸಿಡಿಸಿದ ಯಶಸ್ವಿ

India vs England 2nd Test: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಕರ್ಷಕ ದ್ವಿಶತಕ ಬಾರಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಅವರ ಈ ದ್ವಿಶತಕದೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 03, 2024 | 10:16 AM

ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 277 ಎಸೆತಗಳಲ್ಲಿ ತಮ್ಮ ಚೊಚ್ಚಲ ಡಬಲ್ ಸೆಂಚುರಿ ಪೂರೈಸಿದ್ದಾರೆ.

1 / 5
ಮೊದಲ ದಿನದಾಟದಲ್ಲಿ 151 ಎಸೆತಗಳಲ್ಲಿ ಶತಕ ಬಾರಿಸಿದ್ದ ಜೈಸ್ವಾಲ್ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ ಮೊದಲ ದಿನದಾಟದ ಮುಕ್ತಾಯದ ವೇಳೆ ಅಜೇಯ 179 ರನ್ ಬಾರಿಸಿ ದ್ವಿತೀಯ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.

2 / 5
ಇದೀಗ ದ್ವಿತೀಯ ದಿನದಾಟದ ಆರಂಭದಲ್ಲೇ ಭರ್ಜರಿ ಬ್ಯಾಟಿಂಗ್​ನೊಂದಿಗೆ ಮಿಂಚಿದ ಯುವ ದಾಂಡಿಗ 277 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 18 ಫೋರ್​ಗಳೊಂದಿಗೆ 201* ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಡಬಲ್ ಸೆಂಚುರಿ ಬಾರಿಸಿದ 2ನೇ ಕಿರಿಯ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ವಿಶೇಷ ಎಂದರೆ ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಹೊರತುಪಡಿಸಿದ ಟೀಮ್ ಇಂಡಿಯಾದ ಯಾವುದೇ ಅಗ್ರ ಕ್ರಮಾಂಕದ ಬ್ಯಾಟರ್ 35 ಕ್ಕಿಂತ ಹೆಚ್ಚಿನ ರನ್ ಕಲೆಹಾಕಿಲ್ಲ. ಅಂದರೆ ಭಾರತ ತಂಡವು ಪೇರಿಸಿರುವ ಒಟ್ಟು ರನ್​ಗಳ ಅರ್ಧದಷ್ಟು ಸ್ಕೋರ್ ಜೈಸ್ವಾಲ್ ಅವರ ಬ್ಯಾಟ್​ನಿಂದಲೇ ಬಂದಿದೆ.

4 / 5
ಯಶಸ್ವಿ ಜೈಸ್ವಾಲ್ ಅವರ ಈ ದ್ವಿಶತಕದ ನೆರವಿನಿಂದ ಭಾರತ ತಂಡವು 102 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 375 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಯಶಸ್ವಿ ಜೈಸ್ವಾಲ್ (202) ಹಾಗೂ ಕುಲ್ದೀಪ್ ಯಾದವ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

5 / 5

Published On - 10:10 am, Sat, 3 February 24

Follow us
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ