Yashasvi Jaiswal: ಜೈ ಹೋ ಜೈಸ್ವಾಲ್: ಭರ್ಜರಿ ದ್ವಿಶತಕ ಸಿಡಿಸಿದ ಯಶಸ್ವಿ
TV9 Web | Updated By: ಝಾಹಿರ್ ಯೂಸುಫ್
Updated on:
Feb 03, 2024 | 10:16 AM
India vs England 2nd Test: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಕರ್ಷಕ ದ್ವಿಶತಕ ಬಾರಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಅವರ ಈ ದ್ವಿಶತಕದೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.
1 / 5
ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 277 ಎಸೆತಗಳಲ್ಲಿ ತಮ್ಮ ಚೊಚ್ಚಲ ಡಬಲ್ ಸೆಂಚುರಿ ಪೂರೈಸಿದ್ದಾರೆ.
2 / 5
ಮೊದಲ ದಿನದಾಟದಲ್ಲಿ 151 ಎಸೆತಗಳಲ್ಲಿ ಶತಕ ಬಾರಿಸಿದ್ದ ಜೈಸ್ವಾಲ್ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ ಮೊದಲ ದಿನದಾಟದ ಮುಕ್ತಾಯದ ವೇಳೆ ಅಜೇಯ 179 ರನ್ ಬಾರಿಸಿ ದ್ವಿತೀಯ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.
3 / 5
ಇದೀಗ ದ್ವಿತೀಯ ದಿನದಾಟದ ಆರಂಭದಲ್ಲೇ ಭರ್ಜರಿ ಬ್ಯಾಟಿಂಗ್ನೊಂದಿಗೆ ಮಿಂಚಿದ ಯುವ ದಾಂಡಿಗ 277 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 18 ಫೋರ್ಗಳೊಂದಿಗೆ 201* ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಡಬಲ್ ಸೆಂಚುರಿ ಬಾರಿಸಿದ 2ನೇ ಕಿರಿಯ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
4 / 5
ವಿಶೇಷ ಎಂದರೆ ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಹೊರತುಪಡಿಸಿದ ಟೀಮ್ ಇಂಡಿಯಾದ ಯಾವುದೇ ಅಗ್ರ ಕ್ರಮಾಂಕದ ಬ್ಯಾಟರ್ 35 ಕ್ಕಿಂತ ಹೆಚ್ಚಿನ ರನ್ ಕಲೆಹಾಕಿಲ್ಲ. ಅಂದರೆ ಭಾರತ ತಂಡವು ಪೇರಿಸಿರುವ ಒಟ್ಟು ರನ್ಗಳ ಅರ್ಧದಷ್ಟು ಸ್ಕೋರ್ ಜೈಸ್ವಾಲ್ ಅವರ ಬ್ಯಾಟ್ನಿಂದಲೇ ಬಂದಿದೆ.
5 / 5
ಯಶಸ್ವಿ ಜೈಸ್ವಾಲ್ ಅವರ ಈ ದ್ವಿಶತಕದ ನೆರವಿನಿಂದ ಭಾರತ ತಂಡವು 102 ಓವರ್ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 375 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಯಶಸ್ವಿ ಜೈಸ್ವಾಲ್ (202) ಹಾಗೂ ಕುಲ್ದೀಪ್ ಯಾದವ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
Published On - 10:10 am, Sat, 3 February 24