Yashasvi Jaiswal: ಸಿಡಿಲಬ್ಬರದ ಡಬಲ್ ಸೆಂಚುರಿ ಸಿಡಿಸಿದ ಜೈಸ್ವಾಲ್

| Updated By: ಝಾಹಿರ್ ಯೂಸುಫ್

Updated on: Feb 18, 2024 | 1:28 PM

Yashasvi Jaiswal: ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಯುವ ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಸಿಡಿಸಿದ್ದಾರೆ. 2ನೇ ಟೆಸ್ಟ್ ಪಂದ್ಯದಲ್ಲಿ 209 ರನ್ ಬಾರಿಸಿ ಅಬ್ಬರಿಸಿದ್ದ ಜೈಸ್ವಾಲ್ ಇದೀಗ ರಾಜ್​ಕೋಟ್ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

1 / 5
ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಸ್ಪೋಟಕ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 3ನೇ ದಿನದಾಟದಲ್ಲಿ 122 ಎಸೆತಗಳಲ್ಲಿ ಶತಕ ಪೂರೈಸಿದ್ದರು.

2 / 5
ಇನ್ನು ನಾಲ್ಕನೇ ದಿನದಾಟದಲ್ಲಿ 104 ರನ್​ಗಳೊಂದಿಗೆ ಇನಿಂಗ್ಸ್​ ಮುಂದುವರೆಸಿದ ಯಶಸ್ವಿ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಯಾಯಿತು. ಅದರಲ್ಲೂ ಜೇಮ್ಸ್ ಅ್ಯಂಡರ್ಸನ್ ಅವರ ಒಂದೇ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸ್​ ಸಿಡಿಸಿ ಅಬ್ಬರಿಸಿದರು.

3 / 5
ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದ ಯಶಸ್ವಿ ಜೈಸ್ವಾಲ್ ಕೇವಲ 231 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ ಭರ್ಜರಿ ದ್ವಿಶತಕ ಪೂರೈಸಿದರು. ಈ ಮೂಲಕ ಇಂಗ್ಲೆಂಡ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಸಿಡಿಸಿದ ವಿಶೇಷ ಸಾಧನೆ ಮಾಡಿದರು.

4 / 5
ಇದಕ್ಕೂ ಮುನ್ನ ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 209 ರನ್​ ಬಾರಿಸಿದ್ದರು. ಇದೀಗ ಮತ್ತೊಮ್ಮೆ ದ್ವಿಶತಕ ಬಾರಿಸುವ ಮೂಲಕ ಯುವ ದಾಂಡಿಗ ಅಬ್ಬರಿಸಿರುವುದು ವಿಶೇಷ.

5 / 5
ಈ ಪಂದ್ಯದಲ್ಲಿ 236 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 12 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ ಅಜೇಯ 214 ರನ್ ಬಾರಿಸಿದರು. ಮತ್ತೊಂದೆಡೆ ಜೈಸ್ವಾಲ್​ಗೆ ಉತ್ತಮ ಸಾಥ್ ನೀಡಿದ ಸರ್ಫರಾಝ್ ಖಾನ್ (68) ಅರ್ಧಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ನಷ್ಟಕ್ಕೆ 430 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಅತ್ತ ಇಂಗ್ಲೆಂಡ್ ತಂಡವು ಈ ಪಂಧ್ಯವನ್ನು ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 557 ರನ್​ ಕಲೆಹಾಕಬೇಕು.

Published On - 1:10 pm, Sun, 18 February 24