AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಯಶಸ್ವಿ ಜೈಸ್ವಾಲ್ ಕಣ್ಣು

Yashasvi Jaiswal Eyes Sachin Tendulkar's Record: ಆಗಸ್ಟ್ 15ರಿಂದ ಆರಂಭವಾಗುವ ಶ್ರೀಲಂಕಾ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಎರಡು ದೊಡ್ಡ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. 24ನೇ ವಯಸ್ಸಿಗೆ ಐದು ದೇಶಗಳಲ್ಲಿ ಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟುವ ಅವಕಾಶ ಜೈಸ್ವಾಲ್ ಗಿದೆ. ಅಲ್ಲದೆ, ಐದು ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಟೆಸ್ಟ್‌ನಲ್ಲಿ 50 ಸಿಕ್ಸರ್‌ಗಳನ್ನು ಪೂರೈಸಿದ ಮೂರನೇ ಆರಂಭಿಕ ಆಟಗಾರರಾಗಲಿದ್ದಾರೆ.

ಪೃಥ್ವಿಶಂಕರ
|

Updated on: Aug 12, 2026 | 10:52 PM

Share
ಆಗಸ್ಟ್ 15 ರಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಯಶಸ್ವಿ ಜೈಸ್ವಾಲ್ ದೊಡ್ಡ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ಟೆಸ್ಟ್ ಸ್ವರೂಪದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಜೈಸ್ವಾಲ್ ಅಭ್ಯಾಸ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಉತ್ತಮ ಲಯದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಈ ಸರಣಿಯಲ್ಲಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡಿದರೆ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟುವ ಅವಕಾಶವನ್ನು ಹೊಂದಿದ್ದಾರೆ(PC-PTI).

1 / 5
ಯಶಸ್ವಿ ಜೈಸ್ವಾಲ್ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಬಾರಿಸಿದರೆ, 24 ನೇ ವಯಸ್ಸಿಗೆ ಐದು ವಿಭಿನ್ನ ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಆಟಗಾರನಾಗುತ್ತಾರೆ. ಪ್ರಸ್ತುತ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಪ್ರಸ್ತುತ ಜೈಸ್ವಾಲ್ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಇದೀಗ ಶ್ರೀಲಂಕಾದಲ್ಲಿ ಶತಕ ಬಾರಿಸಿದರೆ, ಸಚಿನ್ ದಾಖಲೆಯನ್ನು ಸರಿಗಟ್ಟಲಿದ್ದಾರೆ(PC-PTI).

2 / 5
ಇದಕ್ಕೆ ಪೂರಕವಾಗಿ ಏಷ್ಯನ್ ಮೈದಾನಗಳಲ್ಲಿ ಯಶಸ್ವಿ ಜೈಸ್ವಾಲ್ ಅವರ ಪ್ರದರ್ಶನ ಅಮೋಘವಾಗಿದೆ. ಏಷ್ಯಾದಲ್ಲಿ ಇದುವರೆಗೆ 15 ಟೆಸ್ಟ್ ಪಂದ್ಯಗಳನ್ನು ಆಡಿರುವ ಜೈಸ್ವಾಲ್ 1,417 ರನ್ ಗಳಿಸಿದ್ದಾರೆ. 54.5. ಸರಾಸರಿ ಹೊಂದಿರುವ ಜೈಸ್ವಾಲ್ ನಾಲ್ಕು ಶತಕಗಳು ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ಅವರ ಅತ್ಯುತ್ತಮ ಸ್ಕೋರ್ ಅಜೇಯ 214 ಆಗಿದೆ(PC-PTI).

3 / 5
ಆದಾಗ್ಯೂ ಶ್ರೀಲಂಕಾ ನೆಲದಲ್ಲಿ ಯಶಸ್ವಿ ಜೈಸ್ವಾಲ್ ಶತಕ ಬಾರಿಸುವುದು ಅಷ್ಟು ಸುಲಭದ ಮಾತಲ್ಲ. ಏಕೆಂದರೆ ಶ್ರೀಲಂಕಾದಲ್ಲಿ ಯಶಸ್ವಿ ಜೈಸ್ವಾಲ್ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಆಡಲಿದ್ದಾರೆ. ಇದು ಶ್ರೀಲಂಕಾ ವಿರುದ್ಧದ ಅವರ ಮೊದಲ ಟೆಸ್ಟ್ ಪಂದ್ಯವಾಗಿದೆ. ಹೀಗಾಗಿ ಸಿಂಹಳೀಯರ ನಾಡಿನಲ್ಲಿ ಜೈಸ್ವಾಲ್ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ(PC-PTI).

4 / 5
ಯಶಸ್ವಿ ಜೈಸ್ವಾಲ್ ಮತ್ತೊಂದು ಮೈಲಿಗಲ್ಲು ಸಾಧಿಸುವ ಅವಕಾಶವನ್ನು ಹೊಂದಿದ್ದಾರೆ. ಟೆಸ್ಟ್ ಸರಣಿಯಲ್ಲಿ ಅವರು ಐದು ಸಿಕ್ಸರ್‌ಗಳನ್ನು ಬಾರಿಸಿದರೆ, ರೋಹಿತ್ ಮತ್ತು ಸೆಹ್ವಾಗ್ ನಂತರ ಟೆಸ್ಟ್‌ನಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ ಮೂರನೇ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ(PC-PTI).

5 / 5
Follow Us