- Kannada News Photo gallery Cricket photos yashasvi jaiswal surpasses rohit sharma becomes leading scorer in 2024 across all t20 matches
Yashasvi Jaiswal: ಟಿ20 ಕ್ರಿಕೆಟ್‌ನಲ್ಲಿ ಜೈಸ್ವಾಲ್ ಅಬ್ಬರದ ಮುಂದೆ ಮಂಕಾಯ್ತು ರೋಹಿತ್ ಆಟ..!
Yashasvi Jaiswal: ನಾಯಕ ಶುಭಮನ್ ಗಿಲ್ ಜತೆಗೂಡಿ ತಂಡಕ್ಕೆ ಉತ್ತಮ ಆರಂಭ ನೀಡಿದ ಯಶಸ್ವಿ ಜೈಸ್ವಾಲ್ 36 ರನ್‌ಗಳ ಇನ್ನಿಂಗ್ಸ್ ಆಡಿದರು. ಆಡಿದ್ದು ಅತ್ಯಲ್ಪ ಇನ್ನಿಂಗ್ಸ್ ಆದರೂ, ಯಶಸ್ವಿ ಜೈಸ್ವಾಲ್ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ದೊಡ್ಡ ದಾಖಲೆಯನ್ನು ಮುರಿದಿದ್ದಾರೆ.
Updated on: Jul 11, 2024 | 7:23 PM

ಜಿಂಬಾಬ್ವೆ ವಿರುದ್ಧ ಬುಧವಾರ ನಡೆದ ಮೂರನೇ ಟಿ20 ಪಂದ್ಯವನ್ನು ಭಾರತ ತಂಡ 23 ರನ್‌ಗಳಿಂದ ಗೆದ್ದು ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯವನ್ನು ಜಿಂಬಾಬ್ವೆ ಗೆದ್ದುಕೊಂಡಿತು, ನಂತರ ಭಾರತ ತಂಡವು ಸತತ ಎರಡು ಪಂದ್ಯಗಳನ್ನು ಗೆದ್ದಿದೆ.

ಈ ಪಂದ್ಯದಲ್ಲಿ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಟೀಂ ಇಂಡಿಯಾದಲ್ಲಿ ಆಡಿದ್ದರು. ಈ ಮೂವರಲ್ಲಿ ಯಶಸ್ವಿ ಮಾತ್ರ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಯಿತು.

ನಾಯಕ ಶುಭಮನ್ ಗಿಲ್ ಜತೆಗೂಡಿ ತಂಡಕ್ಕೆ ಉತ್ತಮ ಆರಂಭ ನೀಡಿದ ಯಶಸ್ವಿ ಜೈಸ್ವಾಲ್ 36 ರನ್‌ಗಳ ಇನ್ನಿಂಗ್ಸ್ ಆಡಿದರು. ಆಡಿದ್ದು ಅತ್ಯಲ್ಪ ಇನ್ನಿಂಗ್ಸ್ ಆದರೂ, ಯಶಸ್ವಿ ಜೈಸ್ವಾಲ್ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ದೊಡ್ಡ ದಾಖಲೆಯನ್ನು ಮುರಿದಿದ್ದಾರೆ.

ಜಿಂಬಾಬ್ವೆ ವಿರುದ್ಧದ ಮೂರನೇ ಪಂದ್ಯದಲ್ಲಿ ಶುಭ್ಮನ್ ಗಿಲ್ ಅವರೊಂದಿಗೆ ಯಶಸ್ವಿ ಜೈಸ್ವಾಲ್ 49 ಎಸೆತಗಳಲ್ಲಿ 67 ರನ್ ಜೊತೆಯಾಟ ನಡೆಸಿದರು. ಯಶಸ್ವಿ 27 ಎಸೆತಗಳಲ್ಲಿ 36 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳು ಸೇರಿದ್ದವು.

ಇದರೊಂದಿಗೆ ಯಶಸ್ವಿ ಜೈಸ್ವಾಲ್ 2024 ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 848 ರನ್ ಕಲೆಹಾಕಿದ್ದಂತ್ತಾಯಿತು. ಇದು ಈ ವರ್ಷ ಟಿ20 ಮಾದರಿಯಲ್ಲಿ ಯಾವುದೇ ಬ್ಯಾಟ್ಸ್‌ಮನ್ ಗಳಿಸಿದ ಗರಿಷ್ಠ ಸ್ಕೋರ್ ಆಗಿದ್ದು, ಅಫ್ಘಾನಿಸ್ತಾನದ ಇಬ್ರಾಹಿಂ ಜದ್ರಾನ್ ಅವರನ್ನು ಜೈಸ್ವಾಲ್ ಹಿಂದಿಕ್ಕಿದ್ದಾರೆ. ಪ್ರಸ್ತುತ 833 ರನ್ ಗಳಿಸಿ ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಅವರನ್ನೂ ಜೈಸ್ವಾಲ್ ಹಿಂದಿಕ್ಕಿದ್ದಾರೆ.

ಭಾರತ ನೀಡಿದ 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜಿಂಬಾಬ್ವೆ ತಂಡವು ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಅವರ ಮ್ಯಾಜಿಕ್ ಮುಂದೆ ಆರು ವಿಕೆಟ್‌ಗೆ 159 ರನ್ ಗಳಿಸಲಷ್ಟೇ ಶಕ್ತವಾಯಿತು. ಅವೇಶ್ ಖಾನ್ 39 ರನ್ ನೀಡಿ ಎರಡು ವಿಕೆಟ್ ಪಡೆದರೆ, ಖಲೀಲ್ ಅಹ್ಮದ್ 15 ರನ್ ನೀಡಿ ಒಂದು ವಿಕೆಟ್ ಪಡೆದರು.




