ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಸ್ಪೋಟಕ ಶತಕ ಸಿಡಿಸಿ ಮಿಂಚಿದರು. ಈ ಶತಕದೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.