Yashasvi Jaiswal: ಜೈಸ್ವಾಲ್ ಅಬ್ಬರಕ್ಕೆ 60 ವರ್ಷಗಳ ಹಳೆಯ ದಾಖಲೆ ಧೂಳೀಪಟ

| Updated By: ಝಾಹಿರ್ ಯೂಸುಫ್

Updated on: Feb 03, 2024 | 7:56 AM

Yashasvi Jaiswal Records: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳೊಂದಿಗೆ 60 ವರ್ಷಗಳ ಹಳೆಯ ರೆಕಾರ್ಡ್ ಅನ್ನು ಕೂಡ ಮುರಿಯುವಲ್ಲಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

1 / 5
ವಿಶಾಖಪಟ್ಟಣಂನಲ್ಲಿನ ಡಾ. ವೈಎಸ್​ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಸ್ಪೋಟಕ ಶತಕ ಸಿಡಿಸಿ ಮಿಂಚಿದರು. ಈ ಶತಕದೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 5
ಈ ಪಂದ್ಯದಲ್ಲಿ 151 ಎಸೆತಗಳಲ್ಲಿ ಶತಕ ಪೂರೈಸಿದ ಯಶಸ್ವಿ ಜೈಸ್ವಾಲ್ ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಅಜೇಯ 179 ರನ್​ ಬಾರಿಸಿದ್ದರು. ಇದರೊಂದಿಗೆ ಇಂಗ್ಲೆಂಡ್ ವಿರುದ್ಧ ಭಾರತದಲ್ಲಿ ಮೊದಲ ದಿನದಾಟದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯೊಂದು ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಬುಧಿ ಕುಂದರನ್ ಅವರ ಹೆಸರಿನಲ್ಲಿತ್ತು. 1964 ರಲ್ಲಿ ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲ ದಿನದಾಟದಲ್ಲೇ ಬುಧಿ 170 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ 60 ವರ್ಷಗಳ ಬಳಿಕ ಈ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಅಳಿಸಿ ಹಾಕಿದ್ದಾರೆ. ವಿಶಾಖಪಟ್ಟಣನಂ ಟೆಸ್ಟ್​ನ ಮೊದಲ ದಿನದಾಟದಲ್ಲೇ 257 ಎಸೆತಗಳಲ್ಲಿ 5 ಸಿಕ್ಸ್​ ಹಾಗೂ 17 ಫೋರ್​ಗಳೊಂದಿಗೆ ಯಶಸ್ವಿ ಅಜೇಯ 179 ರನ್ ಬಾರಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ದಿನದಾಟದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ.

5 / 5
ಹಾಗೆಯೇ ಟೆಸ್ಟ್​ ಕ್ರಿಕೆಟ್​ನ ಮೊದಲ ದಿನದಾಟದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲೂ ಯಶಸ್ವಿ ಜೈಸ್ವಾಲ್ 6ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೀರೇಂದ್ರ ಸೆಹ್ವಾಗ್. 2004 ರಲ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದ ಮೊದಲ ದಿನದಾಟದಲ್ಲೇ ಸೆಹ್ವಾಗ್ 228 ರನ್ ಬಾರಿಸಿ ಅಬ್ಬರಿಸಿದ್ದರು. ಇದೀಗ ಅಜೇಯ 179 ರನ್ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿ ಕಾಣಿಸಿಕೊಂಡಿಸಿದ್ದಾರೆ.