Year Ender 2021: ಈ ವರ್ಷ ಕ್ರಿಕೆಟ್‌ಗೆ ವಿದಾಯ ಹೇಳಿದ ಖ್ಯಾತ ಆಟಗಾರರು ಇವರೇ..!
TV9 Web | Updated By: ಝಾಹಿರ್ ಯೂಸುಫ್
Updated on:
Dec 19, 2021 | 6:32 PM
Year Ender 2021: ಕ್ರಿಕೆಟ್‌ಗೆ ವಿದಾಯ ಹೇಳಿದ 7 ಆಟಗಾರರ ಕಿರು ಪರಿಚಯ ಇಲ್ಲಿದೆ...(ಡೈಲಿಹಂಟ್ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)
1 / 8
2021 ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಎಲ್ಲಾ ಕ್ಷೇತ್ರಗಳಂತೆ ಈ ಬಾರಿ ಕ್ರಿಕೆಟ್ ಕ್ಷೇತ್ರದಲ್ಲೂ ಒಂದಷ್ಟು ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಕ್ರಿಕೆಟ್ ಅಂಗಳದ ಖ್ಯಾತನಾಮರು ಎಂದುಕೊಂಡಿದ್ದ ಕೆಲ ಆಟಗಾರರು ಕ್ರಿಕೆಟ್ ಅಂಗಳಕ್ಕೆ ಗುಡ್ ಬೈ ಹೇಳಿದ್ದಾರೆ. ಹೀಗೆ ವಿದಾಯ ಹೇಳಿದ 7 ಆಟಗಾರರ ಕಿರು ಪರಿಚಯ ಇಲ್ಲಿದೆ...
2 / 8
ಎಬಿ ಡಿವಿಲಿಯರ್ಸ್: ದಕ್ಷಿಣ ಆಫ್ರಿಕಾದ ದಂತಕಥೆ ಎಬಿ ಡಿವಿಲಿಯರ್ಸ್ ನವೆಂಬರ್‌ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿಡಿ 2004 ರಲ್ಲಿ ಅಂತಾರಾಷ್ಟ್ರೀಯ ಪಾದಾರ್ಪಣೆ ಮಾಡಿದ್ದರು. ಈ ನಡುವೆ 114 ಟೆಸ್ಟ್, 228 ODI ಮತ್ತು 78 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾವನ್ನು ಪ್ರತಿನಿಧಿಸಿದರು. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20014 ರನ್ ಗಳಿಸಿರುವ ಎಬಿಡಿ 47 ಶತಕಗಳನ್ನು ಬಾರಿಸಿದ್ದಾರೆ. ಅದರಲ್ಲೂ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 50, 100 ಮತ್ತು 150 ರನ್ ಗಳಿಸಿದ ಆಟಗಾರ ಎಂಬ ವಿಶ್ವ ದಾಖಲೆ ಎಬಿಡಿ ಹೆಸರಿನಲ್ಲಿದೆ.
3 / 8
ಡ್ವೇನ್ ಬ್ರಾವೊ: ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಸೋಲಿನ ಬಳಿಕ ತಂಡದ ಆಲ್‌ರೌಂಡರ್ ಡ್ವೇನ್ ಬ್ರಾವೋ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಅದುವರೆಗೆ 7 ಟಿ20 ವಿಶ್ವಕಪ್‌ಗಳಲ್ಲಿ ಕಾಣಿಸಿಕೊಂಡಿದ್ದ ಬ್ರಾವೊ, 2012 ಮತ್ತು 2016 ರ ಚಾಂಪಿಯನ್ ತಂಡದ ಭಾಗವಾಗಿದ್ದರು. 2004 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಾದಾರ್ಪಣೆ ಮಾಡಿದ್ದ ಬ್ರಾವೊ 6 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. ಅಲ್ಲದೆ ಏಕದಿನದಲ್ಲಿ 199 ಮತ್ತು ಟೆಸ್ಟ್‌ನಲ್ಲಿ 86 ವಿಕೆಟ್‌ಗಳನ್ನು ಪಡೆದಿದ್ದಾರೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 78 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
4 / 8
ಡೇಲ್ ಸ್ಟೇಯ್ನ್: ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇಯ್ನ್ ಆಗಸ್ಟ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಸ್ಟೇಯ್ನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 699 ವಿಕೆಟ್ ಪಡೆದಿದ್ದಾರೆ. ಟೆಸ್ಟ್‌ನಲ್ಲಿ 435, ಏಕದಿನದಲ್ಲಿ 196 ಮತ್ತು ಟಿ20ಯಲ್ಲಿ 64 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು 2343 ದಿನಗಳವರೆಗೆ ನಂಬರ್ 1 ಟೆಸ್ಟ್ ಬೌಲರ್ ಆಗಿ ಉಳಿಯುವ ಮೂಲಕ ಡೇಲ್ ಸ್ಟೇಯ್ನ್ ವಿಶ್ವದಾಖಲೆ ನಿರ್ಮಿಸಿದ್ದರು ಎಂಬುದು ವಿಶೇಷ.
5 / 8
ಅಸ್ಗರ್ ಅಫ್ಘಾನ್: ಅಫ್ಘಾನಿಸ್ತಾನ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿರುವ ಅಸ್ಗರ್ ಅಫ್ಘಾನ್ 2021 ರ ಟಿ20 ವಿಶ್ವಕಪ್ ಟೂರ್ನಿಯ ಮಧ್ಯೆದಲ್ಲಿ ನಿವೃತ್ತಿ ಘೋಷಿಸಿದ್ದರು. ಯುವ ಆಟಗಾರರಿಗೆ ಅವಕಾಶ ಸಿಗಲೆಂದು ನಿವೃತ್ತಿ ನೀಡುವುದಾಗಿ ತಿಳಿಸಿದ್ದ 33 ವರ್ಷ ಅಸ್ಗರ್, ಅಫ್ಘಾನಿಸ್ತಾನ್ ಪರ 6 ಟೆಸ್ಟ್, 114 ಏಕದಿನ ಮತ್ತು 75 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 4246 ರನ್ ಗಳಿಸಿದ್ದಾರೆ.
6 / 8
ಉಪುಲ್ ತರಂಗ: ಶ್ರೀಲಂಕಾದ ಹಿರಿಯ ಆರಂಭಿಕ ಬ್ಯಾಟರ್ ಉಪುಲ್ ತರಂಗ ಫೆಬ್ರವರಿ 23 ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. 15 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ, ಅವರು ಶ್ರೀಲಂಕಾ ತಂಡದ ನಾಯಕರಾಗಿ ಕೂಡ ಕಾಣಿಸಿಕೊಂಡಿದ್ದರು. ಇನ್ನು ತರಂಗ ಕೊನೆಯ ಬಾರಿಗೆ 2019 ರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಶ್ರೀಲಂಕಾ ಪರ ಆಡಿದ್ದರು. ಲಂಕಾ ಪರ ಏಕದಿನ ತಂಡದ ಯಶಸ್ವಿ ಬ್ಯಾಟರ್ಗಳಲ್ಲಿ ಒಬ್ಬರು ಎನಿಸಿಕೊಂಡಿದ್ದ ತರಂಗ 235 ಪಂದ್ಯಗಳಲ್ಲಿ 33.74 ಸರಾಸರಿಯಲ್ಲಿ 6951 ರನ್ ಗಳಿಸಿದ್ದಾರೆ. ಇದರಲ್ಲಿ 15 ಶತಕಗಳು ಮತ್ತು 37 ಅರ್ಧ ಶತಕಗಳು ಸೇರಿವೆ. ಅಲ್ಲದೆ 26 ಟಿ20 ಪಂದ್ಯಗಳಿಂದ 407 ರನ್ ಗಳಿಸಿದ್ದಾರೆ. ಹಾಗೆಯೇ ಶ್ರೀಲಂಕಾ ಪರ 31 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ವೇಳೆ ಮೂರು ಶತಕಗಳು ಮತ್ತು ಎಂಟು ಅರ್ಧ ಶತಕಗಳನ್ನು ಒಳಗೊಂಡಂತೆ 21.89 ರ ಸರಾಸರಿಯಲ್ಲಿ 1754 ರನ್ ಗಳಿಸಿದ್ದರು.
7 / 8
ಯೂಸುಫ್ ಪಠಾಣ್: ಟೀಮ್ ಇಂಡಿಯಾ ಪರ 57 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಪಠಾಣ್ 810 ರನ್ ಕಲೆಹಾಕಿದ್ದಾರೆ. ಅಲ್ಲದೆ ಬೌಲಿಂಗ್ನಲ್ಲೂ ಮಿಂಚುವ ಮೂಲಕ 33 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 22 ಟಿ20 ಪಂದ್ಯಗಳನ್ನಾಡಿರುವ ಅವರು 236 ರನ್ ಬಾರಿಸಿದ್ದಾರೆ. ಹಾಗೆಯೇ ಟಿ20 ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಭಾಗವಾಗಿದ್ದವರಲ್ಲಿ ಯೂಸುಫ್ ಪಠಾಣ್ ಕೂಡ ಒಬ್ಬರು ಎಂಬುದು ವಿಶೇಷ.
8 / 8
ವಿನಯ್ ಕುಮಾರ್: ದಾವಣಗೆರೆ ಎಕ್ಸ್ಪ್ರೆಸ್ ಖ್ಯಾತಿಯ ವಿನಯ್ ಕುಮಾರ್ 2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು. ಅಲ್ಲದೆ ಭಾರತದ 31 ಏಕದಿನ ಪಂದ್ಯಗಳನ್ನಾಡಿದ್ದು, 48 ವಿಕೆಟ್ ಪಡೆದಿದ್ದಾರೆ. ಇನ್ನು 9 ಟಿ20 ಪಂದ್ಯಗಳಲ್ಲಿ 10 ವಿಕೆಟ್ ಪಡೆದಿದ್ದರು. ಹಾಗೆಯೇ ಒಂದೇ ಒಂದು ಟೆಸ್ಟ್ ಪಂದ್ಯವನ್ನಾಡಿರುವ ವಿನಯ್ ಕುಮಾರ್ 1 ವಿಕೆಟ್ ಪಡೆದಿದ್ದರು.