ಬಾಂಗ್ಲಾ ಪ್ರವಾಸ ಮುಗಿಸಿರುವ ಟೀಂ ಇಂಡಿಯಾ ಇದರೊಂದಿಗೆ 2022ರ ವೇಳಾಪಟ್ಟಿಯನ್ನು ಪೂರ್ಣಗೊಳಿಸಿದೆ. ಈ ವರ್ಷ ಟೀಂ ಇಂಡಿಯಾ ಹಲವು ಏಳು ಬೀಳುಗಳನ್ನು ಕಂಡಿದೆ. ಅದರಲ್ಲೂ 2 ಪ್ರಮುಖ ಈವೆಂಟ್ಗಳನ್ನು ಜಯಿಸುವಲ್ಲಿ ವಿಫಲವಾಗಿದೆ. ಆದರೂ ತಂಡದ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಹಲವು ಮೊದಲುಗಳಿಗೆ ನಾಂದಿ ಹಾಡಿದ್ದಾರೆ.
ಈ ವರ್ಷ ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೆ ಇರಬಹುದು. ಆದರೆ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಟಿ20 ಯಲ್ಲಿ ರನ್ ಸರದಾರನಾಗಿ ಹೊರಹೊಮ್ಮಿದ್ದಾರೆ. ಈ ವರ್ಷ 31 ಟಿ20 ಪಂದ್ಯಗಳನ್ನಾಡಿರುವ ಸೂರ್ಯ 1164 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 9 ಅರ್ಧ ಶತಕ ಕೂಡ ಸೇರಿವೆ. ಅಲ್ಲದೆ ಅತಿ ಹೆಚ್ಚು ರನ್ ಗಳಿಸಿದ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್ ಪಟ್ಟಿಯಲ್ಲೂ ನಂ.1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಐಸಿಸಿ ಶ್ರೇಯಾಂಕದಲ್ಲಿ ಭಾರತದ ಸೂರ್ಯಕುಮಾರ್ ನಂತರ ಎರಡನೇ ಸ್ಥಾನದಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಇದ್ದಾರೆ. ಅಲ್ಲದೆ ಈ ವರ್ಷ ಟಿ20 ಕ್ರಿಕೆಟ್ನಲ್ಲಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿಯೂ ರಿಜ್ವಾನ್ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. 2022 ರಲ್ಲಿ ಅವರು 25 ಪಂದ್ಯಗಳಲ್ಲಿ 996 ರನ್ ಗಳಿಸಿದ್ದಾರೆ.
ಈ ಇಬ್ಬರ ಬಳಿಕ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 20 ಪಂದ್ಯಗಳ 781 ರನ್ ಗಳಿಸಿದ್ದಾರೆ. ಜೊತೆಗೆ ಟಿ20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಕೊಹ್ಲಿ ಟಾಪ್ 10 ರಲ್ಲಿ ಸ್ಥಾನ ಪಡೆದಿದ್ದಾರೆ.
ಜಿಂಬಾಬ್ವೆಯ ಸಿಕಂದರ್ ರಜಾ ಅತಿ ಹೆಚ್ಚು ರನ್ ಗಳಿಸಿದ 4ನೇ ಆಟಗಾರ ಎನಿಸಿಕೊಂಡಿದ್ದಾರೆ. ಸಿಕಂದರ್ 2022ರಲ್ಲಿ ಆಡಿದ 24 ಟಿ20 ಪಂದ್ಯಗಳ 23 ಇನ್ನಿಂಗ್ಸ್‌ಗಳಲ್ಲಿ 735 ರನ್ ಗಳಿಸಿದ್ದಾರೆ.
ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ 5 ನೇ ಸ್ಥಾನದಲ್ಲಿದ್ದಾರೆ. ಈ ವರ್ಷ ಬಾಬರ್ ಆಡಿರುವ 26 ಪಂದ್ಯಗಳ 26 ಇನ್ನಿಂಗ್ಸ್‌ಗಳಲ್ಲಿ 735 ರನ್ ಗಳಿಸಿದ್ದಾರೆ.
Published On - 2:13 pm, Mon, 26 December 22