1- ಯಜ್ವೇಂದ್ರ ಚಹಾಲ್: ಈ ವರ್ಷ ಟೀಮ್ ಇಂಡಿಯಾ ಪರ 32 ಇನಿಂಗ್ಸ್ನಲ್ಲಿ ಬೌಲಿಂಗ್ ಮಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 44 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್ ತಂಡದಲ್ಲಿದ್ದ ಚಹಾಲ್ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.