- Kannada News Photo gallery Cricket photos Young India Equals Team India's 11 individual century Record
ಟೀಮ್ ಇಂಡಿಯಾದ 11 ಶತಕಗಳ ದಾಖಲೆ ಸರಿಗಟ್ಟಿದ ಯಂಗ್ ಇಂಡಿಯಾ
Team India: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ 5 ಶತಕ ಸಿಡಿಸಿದ್ದ ಟೀಮ್ ಇಂಡಿಯಾ ಬ್ಯಾಟರ್ಗಳು ಇದೀಗ ನಾಲ್ಕನೇ ಪಂದ್ಯದಲ್ಲೂ 3 ಸೆಂಚುರಿ ಬಾರಿಸಿದ್ದಾರೆ. ಈ ಶತಕಗಳೊಂದಿಗೆ ಯಂಗ್ ಇಂಡಿಯಾ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ 46 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
Updated on: Jul 28, 2025 | 2:55 PM

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳ ಅಬ್ಬರ ಮುಂದುವರೆದಿದೆ. ಈ ಅಬ್ಬರದೊಂದಿಗೆ ಭಾರತೀಯ ದಾಂಡಿಗರು ಟೀಮ್ ಇಂಡಿಯಾದ ಬ್ಯಾಟರ್ಗಳ ವಿಶೇಷ ದಾಖಲೆ ಸರಿಗಟ್ಟಿದ್ದಾರೆ. ಅಂದರೆ ಬರೋಬ್ಬರಿ 46 ವರ್ಷಗಳ ಬಳಿಕ ಭಾರತೀಯ ಬ್ಯಾಟರ್ಗಳು ಒಂದೇ ಸರಣಿಯಲ್ಲಿ 11 ಸೆಂಚುರಿ ಸಿಡಿಸಿದ್ದಾರೆ.

ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

ಇನ್ನು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಶುಭ್ಮನ್ ಗಿಲ್ (269) ದ್ವಿಶತಕ ಸಿಡಿಸಿದ್ದರು. ಆ ಬಳಿಕ ದ್ವಿತೀಯ ಇನಿಂಗ್ಸ್ನಲ್ಲಿ 161 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. ಹಾಗೆಯೇ ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100) ಶತಕ ಬಾರಿಸಿದ್ದರು.

ಇದೀಗ ಮ್ಯಾಂಚೆಸ್ಟರ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ (103), ರವೀಂದ್ರ ಜಡೇಜಾ (107) ಹಾಗೂ ವಾಷಿಂಗ್ಟನ್ ಸುಂದರ್ (101) ಶತಕ ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಭಾರತೀಯ ಬ್ಯಾಟರ್ಗಳು ಹೊಸ ಇತಿಹಾಸ ನಿರ್ಮಿಸುವತ್ತ ದಾಪುಗಾಲಿಟ್ಟಿದ್ದಾರೆ. ಅದು ಸಹ 46 ವರ್ಷಗಳ ಬಳಿಕ.

ಅಂದರೆ 1978-79 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಒಟ್ಟು 11 ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 5 ಪಂದ್ಯಗಳ ಮೂಲಕ ಭಾರತದ ಯಂಗ್ ಬ್ಯಾಟರ್ಗಳು ಒಟ್ಟು 12 ಶತಕ ಸಿಡಿಸಿದ್ದಾರೆ. ಈ ಮೂಲಕ 46 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಣಿಯೊಂದರಲ್ಲಿ 12 ಶತಕಗಳ ಸಾಧನೆ ಮಾಡಿದ್ದಾರೆ.




