AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಅತಿ ಕಿರಿಯ; ಸಚಿನ್ ದಾಖಲೆ ಮುರಿದ ವೈಭವ್

Youngest Indian Cricketer: ಬಿಸಿಸಿಐ ಐರ್ಲೆಂಡ್, ಇಂಗ್ಲೆಂಡ್ ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತ ಟಿ20 ತಂಡವನ್ನು ಪ್ರಕಟಿಸಿದೆ. ಶ್ರೇಯಸ್ ಅಯ್ಯರ್ ನಾಯಕರಾಗಿದ್ದು, ತಿಲಕ್ ವರ್ಮಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಐಪಿಎಲ್‌ನಲ್ಲಿ ಮಿಂಚಿದ 15 ವರ್ಷದ ವೈಭವ್ ಸೂರ್ಯವಂಶಿ ತಂಡಕ್ಕೆ ಆಯ್ಕೆಯಾಗಿ, ಸಚಿನ್ ತೆಂಡೂಲ್ಕರ್ ಅವರ 36 ವರ್ಷಗಳ ಹಳೆಯ ದಾಖಲೆಯನ್ನು ಮುರಿದು, ಭಾರತ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರರಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 06, 2026 | 3:11 PM

Share
ಜೂನ್-ಜುಲೈನಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಾಗೂ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ಟಿ20 ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. 16 ಸದಸ್ಯರ ಈ ತಂಡವನ್ನು ನೂತನ ನಾಯಕ ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಾಗೆಯೇ ತಿಲಕ್ ವರ್ಮಾ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ (PC- PTI).

1 / 5
ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ಅದರಲ್ಲೂ ಈ ಸೀಸನ್‌ನಲ್ಲಿ ರನ್​ಗಳ ಮಳೆ ಹರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ 15 ವರ್ಷದ ವೈಭವ್ ಸೂರ್ಯವಂಶಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ವೈಭವ್​ ಭಾರತದ ಹಿರಿಯರ ತಂಡದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ದಾಖಲೆಯನ್ನು ಸೃಷ್ಟಿಸಿದ್ದಾರೆ (PC- PTI).

2 / 5
ಕೇವಲ 15 ವರ್ಷಕ್ಕೆ ಭಾರತದ ಹಿರಿಯರ ಟಿ20 ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಬಿಹಾರದ ವೈಭವ್ ಸೂರ್ಯವಂಶಿ, ತಂಡಕ್ಕೆ ಆಯ್ಕೆಯಾಗುವ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರನೆಂಬ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ 36 ವರ್ಷಗಳ ಹಿಂದೆ ಸಚಿನ್ ತೆಂಡೂಲ್ಕರ್ ನಿರ್ಮಿಸಿದ್ದ ದಾಖಲೆಯನ್ನು ವೈಭವ್ ಮುರಿದಿದ್ದಾರೆ (PC- PTI).

3 / 5
 ಸಚಿನ್ ತೆಂಡೂಲ್ಕರ್ 36 ವರ್ಷಗಳ ಹಿಂದೆ 16 ವರ್ಷ 194 ದಿನಗಳ ವಯಸ್ಸಿನಲ್ಲಿ ಭಾರತೀಯ ತಂಡಕ್ಕೆ ಆಯ್ಕೆಯಾಗಿದ್ದರು. ಈ ಮೂಲಕ ಭಾರತ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರೀಯ ಆಟಗಾರನೆಂಬ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು. ಆದರೀಗ ವೈಭವ್ ಸೂರ್ಯವಂಶಿ ಕೇವಲ 15 ವರ್ಷ 71 ದಿನಗಳ ವಯಸ್ಸಿನಲ್ಲಿ ತಂಡಕ್ಕೆ ಆಯ್ಕೆಯಾಗುವ ಮೂಲಕ ಆ ದಾಖಲೆಯನ್ನು ತಮ್ಮ ಹೆಸರಿನಲ್ಲಿ ದಾಖಲಿಸಿದ್ದಾರೆ (PC- PTI).

4 / 5
ವೈಭವ್ ಸೂರ್ಯವಂಶಿ, ಐರ್ಲೆಂಡ್, ಇಂಗ್ಲೆಂಡ್‌ ಹಾಗೂ ಏಷ್ಯನ್ ಗೇಮ್ಸ್​ಗೆ ತಂಡದಲ್ಲಿ ಅವಕಾಶ ಪಡೆದಿರಬಹುದು. ಆದರೆ ಅವರು ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯಲು ಕಾಯಬೇಕಾಗಬಹುದು. ಏಕೆಂದರೆ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಈಗಾಗಲೇ ತಂಡದಲಿದ್ದಾರೆ. ಇವರಿಬ್ಬರಲ್ಲಿ ಒಬ್ಬರು ಕಳಪೆ ಪ್ರದರ್ಶನ ನೀಡಿದರೆ, ಆಗ ವೈಭವ್​ಗೆ ತಂಡದಲ್ಲಿ ಸ್ಥಾನ ಸಿಗಬಹುದು (PC- PTI).

5 / 5
Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ

‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ

ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ

ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ

ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ

ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್