Yusuf Pathan: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಯೂಸುಫ್ ಪಠಾಣ್
Yusuf Pathan Election Result: ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಪರ 174 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಯೂಸುಫ್ ಪಠಾಣ್ 1415 ರನ್ ಮತ್ತು 42 ವಿಕೆಟ್ ಕಬಳಿಸಿದ್ದರು. ಅದರಲ್ಲೂ 2012 ರಲ್ಲಿ ಮತ್ತು 2014 ರಲ್ಲಿ ಕೆಕೆಆರ್ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪಠಾಣ್ ಕೊಡುಗೆ ತುಂಬಾ ಮಹತ್ವದ್ದು. ಹೀಗಾಗಿಯೇ ಯೂಸುಫ್ ಪಠಾಣ್ಗೆ ಪಶ್ಚಿಮ ಬಂಗಳಾದ ಜನರಿಗೆ ಯೂಸುಫ್ ಪಠಾಣ್ ಚಿರಪರಿಚಿತರಾಗಿದ್ದರು.
1 / 5
ಟೀಮ್ ಇಂಡಿಯಾದ ಮಾಜಿ ಆಟಗಾರ ಯೂಸುಫ್ ಪಠಾಣ್ (Yusuf Pathan) ರಾಜಕೀಯದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಪಶ್ಚಿಮ ಬಂಗಾಳದ ಬಹರಂಪುರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ನಿಂದ (ಟಿಎಂಸಿ) ಸ್ಪರ್ಧಿಸಿದ್ದ ಪಠಾಣ್ ಬರೋಬ್ಬರಿ 64,084 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
2 / 5
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಪಾರುಪತ್ಯ ಹೊಂದಿತ್ತು. ಅದರಲ್ಲೂ ಪಶ್ಚಿಮ ಬಂಗಾಳದ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಕ್ಷೇತ್ರವಾಗಿದ್ದರಿಂದ ಇಲ್ಲಿನ ಫಲಿತಾಂಶ ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು.
3 / 5
ಆದರೆ ಜಿದ್ದಾಜಿದ್ದಿನ ಹೋರಾಟದಲ್ಲಿ ಎರಡು ಬಾರಿಯ ಸಂಸದ ಅಧೀರ್ ರಂಜನ್ ಚೌಧರಿ (2019 ಮತ್ತು 2014) ಅವರಿಗೆ ಸೋಲುಣಿಸುವಲ್ಲಿ ಯೂಸುಫ್ ಪಠಾಣ್ ಯಶಸ್ವಿಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಪಠಾಣ್ 423,451 ಮತಗಳನ್ನು ಪಡೆದರೆ, ಕಾಂಗ್ರೆಸ್ನ ಅಧೀರ್ ರಂಜನ್ 359,367 ಮತಗಳನ್ನು ಗಳಿಸಿದರು. ಇನ್ನು ಬಿಜೆಪಿ ಅಭ್ಯರ್ಥಿ ಡಾ.ನಿರ್ಮಲ್ ಕುಮಾರ್ ಸಹಾ 323,685 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು.
4 / 5
ಈ ಅಮೋಘ ಗೆಲುವಿನ ಬಳಿಕ ಮಾತನಾಡಿದ ಯೂಸುಫ್ ಪಠಾಣ್, ನನ್ನ ಜೊತೆ ನಿಂತ ನಿಮ್ಮೆಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದು ಕೇವಲ ನನ್ನ ಗೆಲುವು ಮಾತ್ರವಲ್ಲ, ಎಲ್ಲಾ ಕಾರ್ಯಕರ್ತರ ಗೆಲುವು. ನಾನು ಈ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಲಿದ್ದೇನೆ. ಇಲ್ಲಿ ಕ್ರೀಡಾ ಅಕಾಡೆಮಿ, ಕೈಗಾರಿಕೋದ್ಯಮಗಳನ್ನು ಸ್ಥಾಪಿಸುವುದು ನನ್ನ ಮೊದಲ ಆದ್ಯತೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ತಿಳಿಸಿದ್ದಾರೆ.
5 / 5
ಟೀಮ್ ಇಂಡಿಯಾ ಪರ 57 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಯೂಸುಫ್ ಪಠಾಣ್ 810 ರನ್ ಕಲೆಹಾಕಿದ್ದಾರೆ. ಅಲ್ಲದೆ ಬೌಲಿಂಗ್ನಲ್ಲೂ ಮಿಂಚುವ ಮೂಲಕ 33 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 22 ಟಿ20 ಪಂದ್ಯಗಳನ್ನಾಡಿರುವ ಅವರು 236 ರನ್ ಬಾರಿಸಿದ್ದಾರೆ. ಹಾಗೆಯೇ ಟಿ20 ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ಆಟಗಾರರಲ್ಲಿ ಯೂಸುಫ್ ಪಠಾಣ್ ಕೂಡ ಒಬ್ಬರು. 2021 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದ ಪಠಾಣ್ ಇದೀಗ ಸಂಸದರಾಗಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ.
Published On - 8:31 am, Wed, 5 June 24