ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್
Yuvraj Samra Records: ಟಿ20 ವಿಶ್ವಕಪ್ನ 31ನೇ ಪಂದ್ಯದಲ್ಲಿ ಕೆನಡಾ ತಂಡದ ಯುವ ದಾಂಡಿಗ ಯುವರಾಜ್ ಸಮ್ರಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯುವರಾಜ್ 65 ಎಸೆತಗಳಲ್ಲಿ 6 ಸಿಕ್ಸ್ ಹಾಗು 11 ಫೋರ್ಗಳೊಂದಿಗೆ 110 ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.
Updated on: Feb 17, 2026 | 2:11 PM

T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 31ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡಕ್ಕೆ 19 ವರ್ಷದ ಯುವರಾಜ್ ಸಮ್ರಾ ಭರ್ಜರಿ ಆರಂಭ ಒದಗಿಸಿದ್ದರು.

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಯುವರಾಜ್ ಸಮ್ರಾ ಆ ಬಳಿಕ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದರು. ಪರಿಣಾಮ ಯುವ ದಾಂಡಿಗನ ಬ್ಯಾಟ್ನಿಂದ ಕೇವಲ 58 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಸೆಂಚುರಿಯೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಅಹ್ಮದ್ ಶೆಹಝಾದ್ ಹೆಸರಿನಲ್ಲಿತ್ತು. 2014 ರ ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ವಿರುದ್ಧ 22 ವರ್ಷದ ಅಹ್ಮದ್ ಶೆಹಝಾದ್ ಶತಕ ಸಿಡಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಯುವರಾಜ್ ಸಮ್ರಾ ಈ ದಾಖಲೆ ಮುರಿದಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 19 ವರ್ಷದ ಯುವರಾಜ್ ಸಮ್ರಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಯುವರಾಜ್ ಸಮ್ರಾ ಅವರ ಈ ಶತಕದ ನೆರವಿನೊಂದಿಗೆ ಕೆನಡಾ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ.
