AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್

Yuvraj Samra Records: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಕೆನಡಾ ತಂಡದ ಯುವ ದಾಂಡಿಗ ಯುವರಾಜ್ ಸಮ್ರಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯುವರಾಜ್ 65 ಎಸೆತಗಳಲ್ಲಿ 6 ಸಿಕ್ಸ್ ಹಾಗು 11 ಫೋರ್​ಗಳೊಂದಿಗೆ 110 ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 17, 2026 | 2:11 PM

Share
T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

1 / 5
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡಕ್ಕೆ 19 ವರ್ಷದ ಯುವರಾಜ್ ಸಮ್ರಾ ಭರ್ಜರಿ ಆರಂಭ ಒದಗಿಸಿದ್ದರು.

2 / 5
ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​​ ಪ್ರದರ್ಶಿಸಿದ್ದ ಯುವರಾಜ್ ಸಮ್ರಾ ಆ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ಕೇವಲ 58 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಸೆಂಚುರಿಯೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಅಹ್ಮದ್ ಶೆಹಝಾದ್ ಹೆಸರಿನಲ್ಲಿತ್ತು. 2014 ರ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ 22 ವರ್ಷದ ಅಹ್ಮದ್ ಶೆಹಝಾದ್ ಶತಕ ಸಿಡಿಸಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಯುವರಾಜ್ ಸಮ್ರಾ ಈ ದಾಖಲೆ ಮುರಿದಿದ್ದಾರೆ.

4 / 5
ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 19 ವರ್ಷದ ಯುವರಾಜ್ ಸಮ್ರಾ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಯುವರಾಜ್ ಸಮ್ರಾ ಅವರ ಈ ಶತಕದ ನೆರವಿನೊಂದಿಗೆ ಕೆನಡಾ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ

ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ