AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಶತಕದೊಂದಿಗೆ 4 ವಿಶ್ವ ದಾಖಲೆ ಬರೆದ ಯುವರಾಜ್

Yuvraj Samra Records: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಕೆನಡಾ ತಂಡದ ಯುವ ದಾಂಡಿಗ ಯುವರಾಜ್ ಸಮ್ರಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯುವರಾಜ್ 65 ಎಸೆತಗಳಲ್ಲಿ 6 ಸಿಕ್ಸ್ ಹಾಗು 11 ಫೋರ್​ಗಳೊಂದಿಗೆ 110 ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ ಹಲವು ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 18, 2026 | 9:05 AM

Share
T20 World Cup 2026: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಯುವರಾಜ್ ಸಮ್ರಾ (Yuvraj Samra) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಯುವ ದಾಂಡಿಗ 4 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 5
ಅತ್ಯಂತ ಕಿರಿಯ ಶತಕಧಾರಿ: ಕೇವಲ 19ನೇ ವಯಸ್ಸಿನಲ್ಲಿ ಶತಕ ಸಿಡಿಸುವ ಮೂಲಕ ಯುವರಾಜ್ ಸಮ್ರಾ ಟಿ20 ವಿಶ್ವಕಪ್​ನಲ್ಲಿ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಅಹಮದ್ ಶೆಹಝಾದ್ ಹೆಸರಿನಲ್ಲಿತ್ತು. ಶೆಹಝಾದ್ 22ನೇ ವಯಸ್ಸಿನಲ್ಲಿ ಈ ದಾಖಲೆ ನಿರ್ಮಿಸಿದ್ದರು.

2 / 5
ಮೊದಲ ಶತಕಧಾರಿ: ಪುರುಷರ ಟಿ20 ವಿಶ್ವಕಪ್‌ನಲ್ಲಿ ಶತಕ ಬಾರಿಸಿದ  ಅಸೋಸಿಯೇಟ್ ರಾಷ್ಟ್ರದ (ಕೆನಡಾ) ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಯುವರಾಜ್ ಸಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಯುವರಾಜ್​ರನ್ನು ಬಿಟ್ಟು ಐಸಿಸಿ ಪೂರ್ಣ ಸದಸ್ಯರಲ್ಲದ ರಾಷ್ಟ್ರದ ಯಾವುದೇ ಬ್ಯಾಟರ್ ಟಿ20 ವಿಶ್ವಕಪ್​ನಲ್ಲಿ ಸೆಂಚುರಿ ಸಿಡಿಸಿಲ್ಲ.

3 / 5
ಕಿರಿಯ ಶತಕಧಾರಿ: ಏಕದಿನ ಅಥವಾ ಟಿ20 ಎರಡೂ ಮಾದರಿಯಲ್ಲಿ ಶತಕ ಬಾರಿಸಿದ ಅತಿ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಕೂಡ ಯುವರಾಜ್ ಸಮ್ರಾ ಹೆಸರಿಗೆ ಸೇರ್ಪಡೆಯಾಗಿದೆ. ಯುವರಾಜ್ 19ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.

4 / 5
ಕೆನಡಾ ಪರ ಗರಿಷ್ಠ ಸ್ಕೋರ್: ನ್ಯೂಝಿಲೆಂಡ್ ವಿರುದ್ಧ ಅವರು ಗಳಿಸಿದ 110 ರನ್ ಕೆನಡಾ ಪರ ವಿಶ್ವಕಪ್‌ನಲ್ಲಿ ದಾಖಲಾದ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದೆ. ಈ ಪಂದ್ಯದಲ್ಲಿ 65 ಎಸೆತಗಳನ್ನು ಎದುರಿಸಿದ ಯುವರಾಜ್ 6 ಸಿಕ್ಸ್ ಹಾಗು 11 ಫೋರ್​ಗಳೊಂದಿಗೆ 110 ರನ್ ಬಾರಿಸಿ ಈ ಸಾಧನೆ ಮಾಡಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ

‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್

ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ

ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ

4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ