T20 World Cup 2024: ಟಿ20 ವಿಶ್ವಕಪ್ಗೆ ಬಲಿಷ್ಠ ಪ್ಲೇಯಿಂಗ್ 11 ಹೆಸರಿಸಿದ ಯುವರಾಜ್ ಸಿಂಗ್
T20 World Cup 2024: ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಜಂಟಿಯಾಗಿ ಆಯೋಜಿಸಲಿರುವ ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಮೊದಲ ಹಂತದಲ್ಲಿ ಭಾರತ ತಂಡವು ಒಟ್ಟು 4 ಪಂದ್ಯಗಳನ್ನಾಡಿದ್ದು, ಈ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಲಿದೆ. ಇದಾದ ಬಳಿಕ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಜರುಗಲಿದೆ.
1 / 6
T20 World Cup 2024: ಟಿ20 ವಿಶ್ವಕಪ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜೂನ್ 2 ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಚುಟುಕು ಕದನದ ಮೊದಲ ಪಂದ್ಯದಲ್ಲಿ ಯುಎಸ್ಎ ಮತ್ತು ಕೆನಡಾ ತಂಡಗಳು ಕಣಕ್ಕಿಳಿಯಲಿದೆ. ಇನ್ನು ಟೀಮ್ ಇಂಡಿಯಾ ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.
2 / 6
ಈ ಅಭಿಯಾನದ 2ನೇ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಹೀಗಾಗಿ ಮೊದಲ ಪಂದ್ಯದಲ್ಲೇ ಬಲಿಷ್ಠ ಪಡೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯುವುದು ಖಚಿತ. ಆದರೆ ಅದಕ್ಕೂ ಮುನ್ನ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಬೇಕೆಂದು ತಿಳಿಸಿದ್ದಾರೆ ಮಾಜಿ ಆಟಗಾರ ಯುವರಾಜ್ ಸಿಂಗ್.
3 / 6
ಯುವರಾಜ್ ಸಿಂಗ್ ಪ್ರಕಾರ, ಭಾರತ ತಂಡವು ಉತ್ತಮ ಆಟಗಾರರ ಆಯ್ಕೆಗಳನ್ನು ಹೊಂದಿದೆ. ಹೀಗಾಗಿ ಅತ್ಯುತ್ತಮ ಆಡುವ ಬಳಗವನ್ನು ರೂಪಿಸಬಹುದು. ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಬೇಕು. ಹಾಗೆಯೇ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡುವುದು ಉತ್ತಮ.
4 / 6
ಇನ್ನು ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಬದಲಿಗೆ ರಿಷಭ್ ಪಂತ್ಗೆ ಸ್ಥಾನ ನೀಡುವುದು ಉತ್ತಮ. ಏಕೆಂದರೆ ಯಾವುದೇ ಹಂತದಲ್ಲೂ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಪಂತ್ನಲ್ಲಿದೆ. ಹೀಗಾಗಿ ಸಂಜು ಸ್ಯಾಮ್ಸನ್ಗಿಂತ ರಿಷಭ್ ಪಂತ್ ನನ್ನ ಮೊದಲ ಆಯ್ಕೆ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.
5 / 6
ಹಾಗೆಯೇ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆಯನ್ನು ಆಡಿಸಬೇಕೆಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ರವೀಂದ್ರ ಜಡೇಜಾ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಟ್ಟಿದ್ದಾರೆ. ಬದಲಾಗಿ ಯುಜ್ವೇಂದ್ರ ಚಹಲ್ ಅವರನ್ನು ಪೂರ್ಣ ಪ್ರಮಾಣದ ಸ್ಪಿನ್ನರ್ ಆಡಿಸಬೇಕೆಂದು ತಿಳಿಸಿದ್ದಾರೆ. ಅದರಂತೆ ಯುವರಾಜ್ ಸಿಂಗ್ ಹೆಸರಿಸಿದ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...
6 / 6
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಯುಜ್ವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್.