- TV9 Kannada Kannada News Photos Cricket Photos Yuzvendra Chahal Makes History: First Indian with 400 T20 Wickets
ಟಿ20 ಕ್ರಿಕೆಟ್‌ನಲ್ಲಿ ಚಹಲ್ ವಿಶ್ವದಾಖಲೆ; 400 ವಿಕೆಟ್ ಪಡೆದ ಮೊದಲ ಭಾರತೀಯ
ಭಾರತದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಟಿ20 ಕ್ರಿಕೆಟ್‌ನಲ್ಲಿ 400 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಇತಿಹಾಸ ಸೃಷ್ಟಿಸಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಹರಿಯಾಣ ಪರ ಆಡುತ್ತಿದ್ದಾಗ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ 3/16 ಪ್ರದರ್ಶನ ನೀಡಿ ಈ ಮೈಲಿಗಲ್ಲು ತಲುಪಿದರು. ಈ ಮೂಲಕ ಅವರು ಭಾರತದ ಶ್ರೇಷ್ಠ ಟಿ20 ಬೌಲರ್‌ಗಳಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
Updated on: Nov 19, 2026 | 10:03 PM

ಭಾರತದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಬುಧವಾರ ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟಿ20 ಮಾದರಿಯಲ್ಲಿ 400 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. 36 ವರ್ಷದ ಚಹಲ್, ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2026-27ರ ಟೂರ್ನಿಯಲ್ಲಿ ತಮಿಳುನಾಡು ವಿರುದ್ಧ ಹರಿಯಾಣ ತಂಡವನ್ನು ಪ್ರತಿನಿಧಿಸುವಾಗ ಈ ಮೈಲಿಗಲ್ಲು ತಲುಪಿದ್ದಾರೆ.

ಈ ಪಂದ್ಯದಲ್ಲಿ ಚಹಲ್ ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 16 ರನ್ ನೀಡಿ ಮೂರು ವಿಕೆಟ್ ಕಬಳಿಸಿದರು. ಅವರ ಅಮೋಘ ಬೌಲಿಂಗ್ ನೆರವಿನಿಂದ ಹರಿಯಾಣ ತಂಡ ತಮಿಳುನಾಡನ್ನು 124 ರನ್‌ಗಳಿಗೆ ಆಲೌಟ್ ಮಾಡಿತು. ಟಿ20 ಕ್ರಿಕೆಟ್‌ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಚಹಲ್, ಭಾರತದ ಶ್ರೇಷ್ಠ ಟಿ20 ಬೌಲರ್‌ಗಳ ಸಾಲಿನಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ.

ತಮಿಳುನಾಡು ವಿರುದ್ಧದ ಪಂದ್ಯ ಆರಂಭಕ್ಕೂ ಮುನ್ನ ಚಹಲ್‌ಗೆ 400 ವಿಕೆಟ್‌ಗಳ ಗಡಿ ತಲುಪಲು ಕೇವಲ ಒಂದು ವಿಕೆಟ್ ಅಗತ್ಯವಿತ್ತು. ಆದರೆ ಅವರು ಮೂರು ವಿಕೆಟ್ ಪಡೆಯುವ ಮೂಲಕ ತಮ್ಮ ಒಟ್ಟು ವಿಕೆಟ್‌ಗಳ ಸಂಖ್ಯೆಯನ್ನು 402ಕ್ಕೆ ಹೆಚ್ಚಿಸಿಕೊಂಡರು. 246 ಟಿ20 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅವರ 3/16 ಬೌಲಿಂಗ್ ಪ್ರದರ್ಶನದಿಂದಾಗಿ ತಮಿಳುನಾಡು ತಂಡ 19.5 ಓವರ್‌ಗಳಲ್ಲಿ 124 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು.

ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಚಹಲ್ ಈಗ ಮೊದಲ ಸ್ಥಾನದಲ್ಲಿದ್ದಾರೆ. ಭುವನೇಶ್ವರ್ ಕುಮಾರ್ 366 ವಿಕೆಟ್ ಹಾಗೂ ಜಸ್ಪ್ರೀತ್ ಬುಮ್ರಾ 354 ವಿಕೆಟ್ ಪಡೆದು ನಂತರದ ಸ್ಥಾನಗಳಲ್ಲಿದ್ದಾರೆ. ಪಿಯೂಷ್ ಚಾವ್ಲಾ 329 ಮತ್ತು ರವಿಚಂದ್ರನ್ ಅಶ್ವಿನ್ 323 ವಿಕೆಟ್‌ಗಳೊಂದಿಗೆ ಮೊದಲ ಐದು ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಹಲ್ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಸೇರಿದಂತೆ ಹಲವು ತಂಡಗಳ ಪರ ಆಡಿದ್ದಾರೆ. ಸದ್ಯ ಅವರು ಪಂಜಾಬ್ ಕಿಂಗ್ಸ್ ತಂಡದ ಆಟಗಾರರಾಗಿದ್ದಾರೆ. 2025ರ ಐಪಿಎಲ್ ಹರಾಜಿಗೂ ಮುನ್ನ ಪಂಜಾಬ್ ಫ್ರಾಂಚೈಸಿ ಅವರನ್ನು 18 ಕೋಟಿ ರೂಪಾಯಿಗೆ ತನ್ನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿತ್ತು.

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



