- Kannada News Photo gallery Cricket photos Yuzvendra Chahal donates INR 1 lakh to victims of Odisha Train accident
Yuzvendra Chahal: ರೈಲು ಅಪಘಾತ ಸಂತ್ರಸ್ತರಿಗೆ 1 ಲಕ್ಷ ರೂ. ನೀಡಿದ ಚಹಾಲ್
Yuzvendra Chahal: ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಯುಜ್ವೇಂದ್ರ ಚಹಾಲ್ ಪ್ರತಿ ಸೀಸನ್ಗೆ 6.5 ಕೋಟಿ ರೂ. ಪಡೆಯುತ್ತಿದ್ದಾರೆ.
Updated on: Jun 06, 2023 | 9:22 PM

ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದ ಸಂತ್ರಸ್ತರಿಗೆ ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಪ್ರಸಿದ್ಧ ಆನ್ಲೈನ್ ಗೇಮಿಂಗ್ ತಂಡ S8ulesports ಇತ್ತೀಚೆಗೆ ಯೂಟ್ಯೂಬ್ ಲೈವ್ ಸ್ಟ್ರೀಮ್ ಮೂಲಕ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ಈ ವೇಳೆ ಲೈವ್ ಬಂದಿದ್ದ ಯುಜ್ವೇಂದ್ರ ಚಹಾಲ್ 1 ಲಕ್ಷ ರೂ. ದೇಣಿಗೆ ನೀಡಿದರು.

ಇನ್ನು ಚಹಾಲ್ ಅವರ ಈ ಮಾನವೀಯ ನಡೆಗೆ S8UL ತಂಡದ ಸದಸ್ಯರು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಚಹಾಲ್ ಅವರು ನೀಡಿದ ದೇಣಿಗೆ ಮೊತ್ತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಟೀಮ್ ಇಂಡಿಯಾ ಆಟಗಾರನಾಗಿರುವ ಯುಜ್ವೇಂದ್ರ ಚಹಾಲ್ ನೀಡಿದ ಮೊತ್ತ ತುಂಬಾ ಕಡಿಮೆ ಎಂದು ಕೆಲವರು ವಾದಿಸಿದರೆ, ಮತ್ತೆ ಕೆಲವರು ಕೊಡುವ ಮನಸ್ಸಿದ್ದರೆ ಸಾಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇವಲ ಐಪಿಎಲ್ನಿಂದಲೇ ಪ್ರತಿ ಸೀಸನ್ಗೆ 6.5 ಕೋಟಿ ರೂ. ಪಡೆಯುತ್ತಿರುವ ಯುಜ್ವೇಂದ್ರ ಚಹಾಲ್ ಅವರ ಕಡೆಯಿಂದ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಮತ್ತಷ್ಟು ನೆರವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ರೈಲು ದುರಂತರದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದ್ದರು.

ಈ ಬಗ್ಗೆ ಟ್ವೀಟ್ ಮಾಡಿದ್ದ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್ ಸ್ಕೂಲ್ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.



















