AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಮತ್ತೆ 5 ವಿಕೆಟ್ ಕಬಳಿಸಿ ಮಿಂಚಿದ ಚಹಲ್

Yuzvendra Chahal: ಇಂಗ್ಲೆಂಡ್​ನಲ್ಲಿ ನಡೆದ ಒನ್ ಡೇ ಕಪ್ ಟೂರ್ನಿಯಲ್ಲಿ ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಯುಜ್ವೇಂದ್ರ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್ ಪಂದ್ಯದಲ್ಲೂ ಚಹಲ್ ಸ್ಪಿನ್ ಮೋಡಿ ಮಾಡಿ ಐದು ವಿಕೆಟ್​ ಕಬಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 11, 2024 | 2:39 PM

Share
ಇಂಗ್ಲೆಂಡ್​ನ ನಾರ್ಥಾಂಪ್ಟನ್​ನ ಕೌಂಟಿ ಮೈದಾನದಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್​ನ 47ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಲ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾರ್ಥಾಂಪ್ಟನ್ ಶೈರ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು.

1 / 6
ಪ್ರಥಮ ಇನಿಂಗ್ಸ್​ನಲ್ಲಿ ನಾರ್ಥಾಂಪ್ಟನ್ ಶೈರ್ ತಂಡವನ್ನು ಡರ್ಬಿಶೈರ್ ಬೌಲರ್​ಗಳು ಕೇವಲ 219 ರನ್​ಗಳಿಗೆ ಆಲೌಟ್ ಮಾಡಿದ್ದರು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಡರ್ಬಿಶೈರ್​ ಪಡೆಗೆ ಯುಜ್ವೇಂದ್ರ ಚಹಲ್ ಆಘಾತದ ಮೇಲೆ ಆಘಾತ ನೀಡಿದರು.

2 / 6
ಅತ್ಯುತ್ತಮ ಸ್ಪಿನ್ ಮೋಡಿ ಮಾಡಿದ ಯುಜ್ವೇಂದ್ರ ಚಹಲ್ 16.3 ಓವರ್​ಗಳಲ್ಲಿ 45 ರನ್ ನೀಡಿ 5 ವಿಕೆಟ್ ಉರುಳಿಸಿದರು. ಈ ಮೂಲಕ ಡರ್ಬಿಶೈರ್ ತಂಡವನ್ನು ಕೇವಲ 165 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಚಹಲ್ ಪ್ರಮುಖ ಪಾತ್ರವಹಿಸಿದರು.

3 / 6
ಈ ಐದು ವಿಕೆಟ್​ಗಳೊಂದಿಗೆ ಯುಜ್ವೇಂದ್ರ ಚಹಲ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈವರೆಗೆ 38 ಫಸ್ಟ್ ಕ್ಲಾಸ್ ಪಂದ್ಯಗಳನ್ನಾಡಿರುವ ಚಹಲ್ ಒಟ್ಟು 102 ವಿಕೆಟ್ ಕಬಳಿಸಿದ್ದಾರೆ. ಇದೇ ವೇಳೆ 3 ಬಾರಿ 5 ವಿಕೆಟ್​ಗಳನ್ನು ಉರುಳಿಸಿದ್ದಾರೆ.

4 / 6
ಇದಕ್ಕೂ ಮುನ್ನ ಯುಜ್ವೇಂದ್ರ ಚಹಲ್ ಕೌಂಟಿ ಕ್ರಿಕೆಟ್​ನಲ್ಲಿ ಒನ್ ಡೇ ಕಪ್ ಟೂರ್ನಿ ಆಡಿದ್ದರು. ನಾರ್ಥಾಂಪ್ಟನ್‌ ಶೈರ್ ತಂಡದ ಪರ ಕಣಕ್ಕಿಳಿದಿದ್ದ ಚಹಲ್ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಉರುಳಿಸಿದ್ದರು. ಕೆಂಟ್ ತಂಡದ ವಿರುದ್ಧದ ಈ ಪಂದ್ಯದಲ್ಲಿ 10 ಓವರ್​ ಎಸೆತಗಳನ್ನು ಎಸೆದಿದ್ದ ಚಹಲ್ 5 ಮೇಡನ್ ಓವರ್​ಗಳೊಂದಿಗೆ ಕೇವಲ 14 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಕೌಂಟಿ ಚಾಂಪಿಯನ್​ಶಿಪ್​ನಲ್ಲೂ ಐದು ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

5 / 6
ಇನ್ನು ಯುಜ್ವೇಂದ್ರ ಚಹಲ್ ಅವರ ಸ್ಪಿನ್ ಮೋಡಿಯಿಂದಾಗಿ ಮೊದಲ ಇನಿಂಗ್ಸ್​ನಲ್ಲಿ 54 ರನ್​ಗಳ ಮುನ್ನಡೆ ಪಡೆದಿರುವ ನಾರ್ಥಾಂಪ್ಟನ್ ಶೈರ್ ತಂಡವು ಇನಿಂಗ್ಸ್ ಆರಂಭಿಸಿದೆ. ಅಲ್ಲದೆ 46 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 178 ರನ್​ ಕಲೆಹಾಕಿ, 232 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ