Yuzvendra Chahal: ಆನಂದ.. ಪರಮಾನಂದ… RCBಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಚಹಲ್
WPL 2024: ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸುವ ಮೂಲಕ ಆರ್ಸಿಬಿ ತಂಡವು ಟ್ರೋಫಿಯನ್ನು ಎತ್ತಿಡಿದಿದೆ. ಈ ಗೆಲುವಿನ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಯುಜ್ವೇಂದ್ರ ಚಹಲ್ ಆರ್ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.