ಝಿಂಬಾಬ್ವೆ ಅಬ್ಬರಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆ ಉಡೀಸ್

Gambia vs Zimbabwe: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಇನಿಂಗ್ಸ್​​ನಲ್ಲಿ ಅತೀ ಹೆಚ್ಚು ಬೌಂಡರಿಗಳನ್ನು (ಸಿಕ್ಸ್-ಫೋರ್) ಬಾರಿಸಿದ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು. ಆದರೀಗ ಈ ವರ್ಲ್ಡ್​ ರೆಕಾರ್ಡ್​ ಅನ್ನು ಝಿಂಬಾಬ್ವೆ ಬ್ಯಾಟರ್​ಗಳು ಅಳಿಸಿ ಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 24, 2024 | 7:24 AM

ಟಿ20 ಕ್ರಿಕೆಟ್​ನಲ್ಲಿ ಝಿಂಬಾಬ್ವೆ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ 20 ಓವರ್​ಗಳಲ್ಲಿ ಅತ್ಯಧಿಕ ರನ್​ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಝಿಂಬಾಬ್ವೆ ಪಾಲಾಗಿದೆ.

1 / 6
ನೈರೋಬಿಯಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ ಝಿಂಬಾಬ್ವೆ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್​ ಗಳಿಸಿದ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

2 / 6
ಇದಕ್ಕೂ ಮುನ್ನ ಈ ದಾಖಲೆ ನೇಪಾಳ ತಂಡದ ಹೆಸರಿನಲ್ಲಿತ್ತು. 2023 ರಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 314 ರನ್ ಕಲೆಹಾಕಿ ಈ ವಿಶ್ವ ದಾಖಲೆ ನಿರ್ಮಿಸಿತ್ತು. ಇದೀಗ ಈ ವರ್ಲ್ಡ್​ ರೆಕಾರ್ಡ್ ಮುರಿಯುವಲ್ಲಿ ಝಿಂಬಾಬ್ವೆ ದಾಂಡಿಗರು ಯಶಸ್ವಿಯಾಗಿದ್ದಾರೆ.

3 / 6
ವಿಶೇಷ ಎಂದರೆ ಈ 344 ರನ್​ಗಳಲ್ಲಿ ಝಿಂಬಾಬ್ವೆ ಬ್ಯಾಟರ್​ಗಳಿಂದ ಮೂಡಿಬಂದ ಬೌಂಡರಿಗಳ ಸಂಖ್ಯೆ 57. ಇದರಲ್ಲಿ 27 ಸಿಕ್ಸ್​ ಹಾಗೂ 30 ಫೋರ್​ಗಳು ಒಳಗೊಂಡಿವೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬೌಂಡರಿಗಳನ್ನು (ಸಿಕ್ಸ್-ಫೋರ್​) ಬಾರಿಸಿದ ವಿಶ್ವ ದಾಖಲೆಯನ್ನು ಝಿಂಬಾಬ್ವೆ ತನ್ನದಾಗಿಸಿಕೊಂಡಿದೆ.

4 / 6
ಈ ಮೊದಲು ಈ ವಿಶ್ವ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು ಎಂಬುದು ವಿಶೇಷ. 2024 ರಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ತಂಡವು 297 ರನ್ ಕಲೆಹಾಕಿತ್ತು. ಈ ವೇಳೆ ಟೀಮ್ ಇಂಡಿಯಾ ಬ್ಯಾಟರ್​ಗಳು 47 ಬೌಂಡರಿಗಳನ್ನು ಬಾರಿಸಿದ್ದರು. ಇದರಲ್ಲಿ 22 ಸಿಕ್ಸ್ ಹಾಗೂ 25 ಫೋರ್​ಗಳು ಒಳಗೊಂಡಿದ್ದವು. ಇದು ಈವರೆಗಿನ ವಿಶ್ವ ದಾಖಲೆಯಾಗಿತ್ತು.

5 / 6
ಇದೀಗ ಗ್ಯಾಂಬಿಯಾ ವಿರುದ್ಧ 27 ಸಿಕ್ಸ್ ಹಾಗೂ 30 ಫೋರ್​ಗಳನ್ನು ಸಿಡಿಸುವ ಮೂಲಕ ಝಿಂಬಾಬ್ವೆ ಬ್ಯಾಟರ್​ಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 50 ಕ್ಕಿಂತ ಅಧಿಕ ಬೌಂಡರಿಗಳನ್ನು ಬಾರಿಸಿದ ವಿಶ್ವದ ಏಕೈಕ ತಂಡ ಎನಿಸಿಕೊಂಡಿದೆ.

6 / 6
Follow us
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ