ಝಿಂಬಾಬ್ವೆ ಅಬ್ಬರಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆ ಉಡೀಸ್
Gambia vs Zimbabwe: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಇನಿಂಗ್ಸ್ನಲ್ಲಿ ಅತೀ ಹೆಚ್ಚು ಬೌಂಡರಿಗಳನ್ನು (ಸಿಕ್ಸ್-ಫೋರ್) ಬಾರಿಸಿದ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು. ಆದರೀಗ ಈ ವರ್ಲ್ಡ್ ರೆಕಾರ್ಡ್ ಅನ್ನು ಝಿಂಬಾಬ್ವೆ ಬ್ಯಾಟರ್ಗಳು ಅಳಿಸಿ ಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.
1 / 6
ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ 20 ಓವರ್ಗಳಲ್ಲಿ ಅತ್ಯಧಿಕ ರನ್ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ಗಳಿಸಿದ ವಿಶ್ವ ದಾಖಲೆ ಝಿಂಬಾಬ್ವೆ ಪಾಲಾಗಿದೆ.
2 / 6
ನೈರೋಬಿಯಲ್ಲಿ ನಡೆದ ಟಿ20 ವಿಶ್ವಕಪ್ನ ಅರ್ಹತಾ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ ಝಿಂಬಾಬ್ವೆ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಗಳಿಸಿದ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.
3 / 6
ಇದಕ್ಕೂ ಮುನ್ನ ಈ ದಾಖಲೆ ನೇಪಾಳ ತಂಡದ ಹೆಸರಿನಲ್ಲಿತ್ತು. 2023 ರಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 314 ರನ್ ಕಲೆಹಾಕಿ ಈ ವಿಶ್ವ ದಾಖಲೆ ನಿರ್ಮಿಸಿತ್ತು. ಇದೀಗ ಈ ವರ್ಲ್ಡ್ ರೆಕಾರ್ಡ್ ಮುರಿಯುವಲ್ಲಿ ಝಿಂಬಾಬ್ವೆ ದಾಂಡಿಗರು ಯಶಸ್ವಿಯಾಗಿದ್ದಾರೆ.
4 / 6
ವಿಶೇಷ ಎಂದರೆ ಈ 344 ರನ್ಗಳಲ್ಲಿ ಝಿಂಬಾಬ್ವೆ ಬ್ಯಾಟರ್ಗಳಿಂದ ಮೂಡಿಬಂದ ಬೌಂಡರಿಗಳ ಸಂಖ್ಯೆ 57. ಇದರಲ್ಲಿ 27 ಸಿಕ್ಸ್ ಹಾಗೂ 30 ಫೋರ್ಗಳು ಒಳಗೊಂಡಿವೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್ವೊಂದರಲ್ಲಿ ಅತೀ ಹೆಚ್ಚು ಬೌಂಡರಿಗಳನ್ನು (ಸಿಕ್ಸ್-ಫೋರ್) ಬಾರಿಸಿದ ವಿಶ್ವ ದಾಖಲೆಯನ್ನು ಝಿಂಬಾಬ್ವೆ ತನ್ನದಾಗಿಸಿಕೊಂಡಿದೆ.
5 / 6
ಈ ಮೊದಲು ಈ ವಿಶ್ವ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು ಎಂಬುದು ವಿಶೇಷ. 2024 ರಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ತಂಡವು 297 ರನ್ ಕಲೆಹಾಕಿತ್ತು. ಈ ವೇಳೆ ಟೀಮ್ ಇಂಡಿಯಾ ಬ್ಯಾಟರ್ಗಳು 47 ಬೌಂಡರಿಗಳನ್ನು ಬಾರಿಸಿದ್ದರು. ಇದರಲ್ಲಿ 22 ಸಿಕ್ಸ್ ಹಾಗೂ 25 ಫೋರ್ಗಳು ಒಳಗೊಂಡಿದ್ದವು. ಇದು ಈವರೆಗಿನ ವಿಶ್ವ ದಾಖಲೆಯಾಗಿತ್ತು.
6 / 6
ಇದೀಗ ಗ್ಯಾಂಬಿಯಾ ವಿರುದ್ಧ 27 ಸಿಕ್ಸ್ ಹಾಗೂ 30 ಫೋರ್ಗಳನ್ನು ಸಿಡಿಸುವ ಮೂಲಕ ಝಿಂಬಾಬ್ವೆ ಬ್ಯಾಟರ್ಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್ವೊಂದರಲ್ಲಿ 50 ಕ್ಕಿಂತ ಅಧಿಕ ಬೌಂಡರಿಗಳನ್ನು ಬಾರಿಸಿದ ವಿಶ್ವದ ಏಕೈಕ ತಂಡ ಎನಿಸಿಕೊಂಡಿದೆ.