AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zimbabwe: ಬರೋಬ್ಬರಿ 408 ರನ್​: ಹೊಸ ಇತಿಹಾಸ ನಿರ್ಮಿಸಿದ ಝಿಂಬಾಬ್ವೆ

ICC World Cup Qualifiers 2023: ಅಂತಿಮ ಓವರ್​ಗಳ ವೇಳೆ ಸಿಕಂದರ್ ರಾಝ 27 ಎಸೆತಗಳಲ್ಲಿ 48 ರನ್ ಬಾರಿಸಿದರೆ, ರಯಾನ್ ಬರ್ಲ್ 16 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 47 ರನ್​ ಸಿಡಿಸಿದರು.

TV9 Web
| Edited By: |

Updated on:Jun 26, 2023 | 8:25 PM

Share
 ICC World Cup Qualifiers 2023: ಹರಾರೆಯಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ಝಿಂಬಾಬ್ವೆ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್ಎ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡಕ್ಕೆ ಆರಂಭಿಕ ಆಟಗಾರ ಜಾಯ್ಲಾರ್ಡ್ ಗುಂಬಿ (78) ಹಾಗೂ ಇನ್ನೊಸೆಂಟ್ (32) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಕಣಕ್ಕಿಳಿದ ನಾಯಕ ಸೀನ್ ವಿಲಿಯಮ್ಸ್ ಸ್ಪೋಟಕ ಬ್ಯಾಟಿಂಗ್​ ಮೂಲಕ ಗಮನ ಸೆಳೆದರು.

2 / 6
3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ವಿಲಿಯಮ್ಸ್ ಮೈದಾನದ ಮೂಲೆ ಮೂಲೆಗೂ ಚೆಂಡನ್ನಟಿದರು. ಪರಿಣಾಮ 65 ಎಸೆತಗಳಲ್ಲಿ ಶತಕ ಮೂಡಿಬಂತು. ಇದಾದ ಬಳಿಕ ಅಬ್ಬರ ಮುಂದುವರೆಸಿದ ವಿಲಿಯಮ್ಸ್ ಯುಎಎಸ್​ ಬೌಲರ್​ಗಳ ಬೆಂಡೆತ್ತಿದರು.

3 / 6
ಭರ್ಜರಿ ಶತಕದ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವಿಲಿಯಮ್ಸ್ 5 ಭರ್ಜರಿ ಸಿಕ್ಸ್ ಹಾಗೂ 21 ಫೋರ್​ಗಳನ್ನು ಸಿಡಿಸಿದರು. ಅಲ್ಲದೆ 101 ಎಸೆತಗಳಲ್ಲಿ 174 ರನ್ ಬಾರಿಸಿ ವಿಕೆಟ್ ಒಪ್ಪಿದರು.

4 / 6
ಇನ್ನು ಅಂತಿಮ ಓವರ್​ಗಳ ವೇಳೆ ಸಿಕಂದರ್ ರಾಝ 27 ಎಸೆತಗಳಲ್ಲಿ 48 ರನ್ ಬಾರಿಸಿದರೆ, ರಯಾನ್ ಬರ್ಲ್ 16 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 47 ರನ್​ ಸಿಡಿಸಿದರು. ಪರಿಣಾಮ ಝಿಂಬಾಬ್ವೆ ತಂಡದ ಮೊತ್ತ 400 ರ ಗಡಿದಾಟಿತು. ಅಂತಿಮವಾಗಿ ನಿಗದಿತ 50 ಓವರ್​ಗಳಲ್ಲಿ ಝಿಂಬಾಬ್ವೆ 6 ವಿಕೆಟ್​ ಕಳೆದುಕೊಂಡು 408 ರನ್ ಕಲೆಹಾಕಿತು.

5 / 6
ಇದು ಏಕದಿನ ಕ್ರಿಕೆಟ್​ನಲ್ಲಿ ಝಿಂಬಾಬ್ವೆ ತಂಡದ ಅತ್ಯಧಿಕ ಸ್ಕೋರ್ ಆಗಿದೆ. ಇದಕ್ಕೂ ಮುನ್ನ 2009 ರಲ್ಲಿ ಕೀನ್ಯಾ ವಿರುದ್ಧ 351 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಯುಎಸ್​ಎ ವಿರುದ್ಧ 408 ರನ್​ ಕಲೆಹಾಕಿ ಹೊಸ ಇತಿಹಾಸ ನಿರ್ಮಿಸಿದೆ.

6 / 6

Published On - 6:17 pm, Mon, 26 June 23

TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್