- Kannada News Photo gallery D Roopa Moudgil as an IPS officer identified as Khadak police officer appeared differently in a silk saree in a new photo shoot
D. Roopa: ಕೈಯಲ್ಲಿ ಖಡ್ಗ ಹಿಡಿದು ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಐಪಿಎಸ್ ಡಿ ರೂಪಾ
ಫ್ಯಾಶನ್ ಡಿಸೈನರ್ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್ ಭಾರ್ಗವಿ ಕೆ.ಆರ್ ಅವರು ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.
Updated on: Oct 24, 2023 | 11:57 AM

ಖಡಕ್ ಪೊಲೀಸ್ ಆಫೀಸರ್ ಎಂದೇ ಗುರುತಿಸಿಕೊಂಡಿರುವ ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್ ಆಗಿ ಹೊಸ ಪೋಟೋಶೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಫ್ಯಾಶನ್ ಡಿಸೈನರ್ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್ ಆಗಿರುವ ಭಾರ್ಗವಿ ಕೆ.ಆರ್ ಅವರು ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

ಡಿ ರೂಪಾ 2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಖಡಕ್ ಆಫೀಸರ್ ಮಾತ್ರವಲ್ಲದೇ ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.




