- Kannada News Photo gallery Daali Dhananjay and Dhanyatha gave marriage invitation to DCM DK Shivakumar
ಡಿಕೆ ಸಹೋದರರನ್ನು ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್
Daali Dhananjay: ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಫೆಬ್ರವರಿ ತಿಂಗಳಲ್ಲಿ ವಿವಾಹವಾಗಲಿದ್ದು, ನಾಡಿನ ಗಣ್ಯರನ್ನು ತಮ್ಮ ಮದುವೆಗೆ ಆಹ್ವಾನಿಸುತ್ತಿದ್ದಾರೆ. ಧನಂಜಯ್ ಹಾಗೂ ಧನ್ಯತಾ ಅವರು ಕೆಲ ದಿನಗಳ ಹಿಂದಷ್ಟೆ ಸಿಎಂ ಅವರನ್ನು ಮದುವೆಗೆ ಆಹ್ವಾನಿಸಿದ್ದರು. ಇದೀಗ ಡಿಸಿಎಂ ಡಿಕೆಶಿ ಹಾಗೂ ಅವರ ಸಹೋದರರನ್ನು ಮದುವೆಗೆ ಆಹ್ವಾನಿಸಿದ್ದಾರೆ.
Updated on: Dec 22, 2024 | 12:14 PM

ಡಾಕ್ಟರ್ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ , ತರಳಬಾಳು ಅವರಿಗೆ ವಿವಾಹ ಪತ್ರಿಕೆ ಆಹ್ವಾನ ನೀಡಿದ ನಟ ಡಾಲಿ ಧನಂಜಯ ಹಾಗೂ ಧನ್ಯತಾ. ಕೆಲ ಮಠಗಳ ಭಕ್ತರಾಗಿರುವ ಡಾಲಿ, ಸ್ವಾಮೀಜಿಗಳ ಜೊತೆ ಗುರು-ಶಿಷ್ಯ ಬಾಂಧವ್ಯ ಹೊಂದಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ಡಾಲಿ ಧನಂಜಯ್ ಅವರ ಸಹೋದರರಾದ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೂ ಮದುವೆ ಆಹ್ವಾನ ಪತ್ರಿಕೆ ನೀಡಿದರು.

ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರುಗಳು ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ. ಇತ್ತೀಚೆಗಷ್ಟೆ ಇಬ್ಬರ ನಿಶ್ಚಿತಾರ್ಥ ನಡೆದಿದ್ದು, ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಆಮಂತ್ರಣ ಪತ್ರಿಕೆ ವಿತರಣೆ ಮಾಡುತ್ತಿದ್ದಾರೆ.

ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಆಮಂತ್ರಣ ಪತ್ರಿಕೆಯನ್ನು ಡಾಲಿ ಧನಂಜಯ್ ನೀಡಿದ್ದು, ಈ ವೇಳೆ ಡಿಕೆಶಿ ಅವರ ಪತ್ನಿಯೂ ಸಹ ಇದ್ದರು.

ಡಾಲಿ ಧನಂಜಯ್ ಅವರು ಚಿತ್ರರಂಗದ ಗಣ್ಯರಿಗೂ ಸಹ ಮದುವೆ ಆಹ್ವಾನ ಪಾತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ನಟರಾದ ಶಿವರಾಜ್ ಕುಮಾರ್ ಇನ್ನೂ ಕೆಲವು ಪ್ರಮುಖ ನಟರಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರುಗಳಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿ ತಮ್ಮ ಮದುವೆಗೆ ಬಂದು ಆಶೀರ್ವದಿಸುವಂತೆ ಮನವಿ ಮಾಡಿದ್ದರು.



















