ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್
Daali Dhananjay: ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
1 / 6
ಡಾಲಿ ಧನಂಜಯ್ ಕೆಲವು ದಿನಗಳ ಹಿಂದಷ್ಟೆ ವೈದ್ಯೆ ಧನ್ಯತಾ ಅವರೊಟ್ಟಿಗೆ ಹಾಸನದ ತಮ್ಮ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ಡಾಲಿಯ ಮದುವೆ ದಿನಾಂಕ ನಿಗದಿ ಆಗಿದೆ.
2 / 6
ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿದ್ದು, ಮೊದಲ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ ಡಾಲಿ.
3 / 6
ಡಾಲಿ ಧನಂಜಯ್-ಧನ್ಯತಾ
4 / 6
ಆ ನಂತರ ಈ ಜೋಡಿ ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರಿಗೂ ಸಹ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರು ವಧು-ವರ ಜೊತೆಗೆ ಫೋಟೊ ತೆಗೆಸಿಕೊಂಡಿದ್ದಾರೆ.
5 / 6
ಕುಮಾರಸ್ವಾಮಿ ಅವರಿಗೂ ಆಹ್ವಾನ ಪತ್ರಿಕೆಯನ್ನು ಡಾಲಿ ಧನಂಜಯ್ ನೀಡಲಿದ್ದಾರೆ. ಆದರೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿರುವ ಕಾರಣ ಅವರು ಮರಳಿ ಬಂದ ಬಳಿಕ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಲಿದ್ದಾರೆ.
6 / 6
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ಅರಮನೆ ಎದುರು ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಭಾರಿ ಸಂಖ್ಯೆಯ ಸೆಲೆಬ್ರಿಟಿಗಳು ವಿವಾಹದಲ್ಲಿ ಭಾಗಹಿಸಲಿದ್ದಾರೆ.