ಮಗನಿಗೆ ಎರೆಯ ಎಂದು ಹೆಸರಿಟ್ಟ ಡಾಲಿ ಧನಂಜಯ; ಈ ಹೆಸರಿಗೆ ಇದೆ ವಿಶೇಷ ಅರ್ಥ

Updated on: Sep 14, 2026 | 9:21 AM

ನಟ ಡಾಲಿ ಧನಂಜಯ ಅವರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ‘ಎರೆಯ’ ಎಂದು ಅವರು ನಾಮಕರಣ ಮಾಡಿದ್ದಾರೆ. ಈ ವಿಶೇಷ ಹೆಸರಿಗೆ ಇರುವ ಅರ್ಥ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಡಾಲಿ ಧನಂಜಯ ಅವರ ಮಗನ ಫೋಟೋ ಗ್ಯಾಲರಿ ಇಲ್ಲಿದೆ..

1 / 5
ಧನಂಜಯ ಮತ್ತು ಧನ್ಯತಾ ದಂಪತಿ ಮಗನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಎಲ್ಲ ಅಭಿಮಾನಿಗಳಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಅವರು ತಿಳಿಸಿದ್ದಾರೆ.

ಧನಂಜಯ ಮತ್ತು ಧನ್ಯತಾ ದಂಪತಿ ಮಗನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಎಲ್ಲ ಅಭಿಮಾನಿಗಳಿಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಅವರು ತಿಳಿಸಿದ್ದಾರೆ.

2 / 5

‘ನಮ್ಮನ್ನ ಪ್ರೀತಿಸುವ ಜೀವಗಳು, ಮಗನನ್ನ ನಮಗೆ ಯಾವಾಗ ತೋರಿಸುತ್ತೀರಿ ಅಂತ ಕೇಳ್ತ ಇದ್ರಿ, ಏನು ಹೆಸರು ಅಂತ ಕೇಳ್ತ ಇದ್ರಿ. ಹಬ್ಬದ ದಿನ, ಇವತ್ತು ಪರಿಚಯಿಸುತ್ತ ಇದೀವಿ’ ಎಂದು ಕ್ಯಾಪ್ಷನ್ ನೀಡಿದ್ದಾರೆ.

3 / 5

‘ಎರೆಯ- ಪುರಾತನ ಕನ್ನಡ ಪರಂಪರೆಯ ಗೌರವಪೂರ್ಣ ಪದ. ಇದರ ಅರ್ಥ ಒಡೆಯ, ಸ್ವಾಮಿ, ಅಧಿಪತಿ. ಒಂದು ಕಾಲದಲ್ಲಿ ರಾಜರು ಮತ್ತು ಅರಸರನ್ನು ಗೌರವದಿಂದ ಸಂಬೋಧಿಸಲು ಬಳಸುತ್ತಿದ್ದ ಹೆಸರು’ ಎಂದಿದ್ದಾರೆ ಡಾಲಿ.

4 / 5

‘ಇತಿಹಾಸದ ಪುಟಗಳಲ್ಲಿ, ಚಾಲುಕ್ಯರ ಮಹಾರಾಜ ಇಮ್ಮಡಿ ಪುಲಕೇಶಿ ಅವರ ಬಾಲ್ಯದ ಹೆಸರಾಗಿಯೂ Ereya ಎಂಬ ಹೆಸರು ಕಾಣಿಸುತ್ತದೆ’ ಎನ್ನುವ ಮೂಲಕ ವಿಶೇಷ ಹೆಸರಿನ ಬಗ್ಗೆ ಧನಂಜಯ ಮಾಹಿತಿ ನೀಡಿದ್ದಾರೆ.

5 / 5

‘ಆ ರಾಜರ , ಪಾರಂಪರಿಕ ಮತ್ತು ಶಕ್ತಿಯುತ ಅರ್ಥವನ್ನು ಹೊತ್ತಿರುವ ನಮ್ಮ ಬದುಕಿನ ಪುಟ್ಟ ಅಧಿಪತಿ, ನಮ್ಮ ಹೃದಯದ ರಾಜ, ನಮ್ಮ ಎರೆಯ. ನಿಮ್ಮ ಪ್ರೀತಿ , ಆಶೀರ್ವಾದ ಸದಾ ಇರಲಿ’ ಎಂದು ಪೋಸ್ಟ್ ಮಾಡಿದ್ದಾರೆ.

Published On - 9:17 am, Mon, 14 September 26

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us