AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಡಂಬಳದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ರೈತರು ಆಯೋಜಿಸಿದ ಈ ಕ್ರೀಡೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸಿತು. ವಿವಿಧ ಜಿಲ್ಲೆಗಳಿಂದ ಬಂದ ಎತ್ತುಗಳು ಶರವೇಗದಲ್ಲಿ ಓಡಿ ಗಮನ ಸೆಳೆದವು. ಸಾವಿರಾರು ಜನ ಸೇರಿ ಕ್ರೀಡೆಗೆ ಹುಮ್ಮಸ್ಸು ತುಂಬಿದರು. ಎತ್ತುಗಳ ಮಿಂಚಿನ ಓಟದ ಝಲಕ್ ಇಲ್ಲಿದೆ ನೋಡಿ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Apr 17, 2026 | 2:35 PM

Share
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮದ ರೈತ ಬಾಂಧವರು ಸ್ವಯಂಪ್ರೇರಿತವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು, ಇದು ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬವಾಗಿತ್ತು. ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ ಎತ್ತುಗಳ ಜೋಡಿಗಳು ಸ್ಪರ್ಧೆಗೆ ಮತ್ತಷ್ಟು ಮೆರುಗು ನೀಡಿದವು.

1 / 6
ಅಖಾಡಕ್ಕೆ ಎಂಟ್ರಿ ಕೊಟ್ಟ ಎತ್ತುಗಳ ಗಂಭೀರ ನಡೆ ಮತ್ತು ಓಟ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಕಟ್ ಮಸ್ತಾಗಿ ಬೆಳೆಸಿದ ಎತ್ತುಗಳು ಶರವೇಗದಲ್ಲಿ ಓಡಿ ಧೂಳೆಬ್ಬಿಸಿದ ದೃಶ್ಯಗಳು ವಿಶೇಷವಾಗಿದ್ದವು. ಎತ್ತುಗಳ ದೈಹಿಕ ಸಾಮರ್ಥ್ಯ ಹಾಗೂ ತರಬೇತಿ ಸ್ಪಷ್ಟವಾಗಿ ಕಾಣಿಸಿತು.

2 / 6
ಒಂದು ನಿಮಿಷದಲ್ಲಿ ಹೆಚ್ಚು ದೂರ ಓಡುವ ಜೋಡಿಯನ್ನು ವಿಜೇತರೆಂದು ಘೋಷಿಸಲಾಯಿತು. ಪ್ರಥಮ ಬಹುಮಾನ 51 ಸಾವಿರ, ದ್ವಿತೀಯ 41 ಸಾವಿರ ಮತ್ತು ತೃತೀಯ 31 ಸಾವಿರ ರೂಪಾಯಿ ಇತ್ತು. ಒಟ್ಟು 9 ಬಹುಮಾನಗಳನ್ನು ನೀಡಲಾಗಿದ್ದು, ಸ್ಪರ್ಧಿಗಳು ಉತ್ಸಾಹದಿಂದ ಪಾಲ್ಗೊಂಡರು.

3 / 6
ಎತ್ತುಗಳ ಮಾಲೀಕರು ವಿಶೇಷ ಆಹಾರಗಳಾದ ಹುರುಳಿ, ಜೋಳದ ನುಚ್ಚು, ಹಿಂಡಿ ನೀಡಿ ಎತ್ತುಗಳನ್ನು ಸ್ಪರ್ಧೆಗೆ ತಯಾರಿಸುತ್ತಾರೆ. ಕೃಷಿ ಕೆಲಸದ ಜೊತೆಗೆ ಈ ಕ್ರೀಡೆಗೆ ಹೆಚ್ಚಿನ ಸಮಯ ಮೀಸಲಿಡುತ್ತಾರೆ. ಇದರಿಂದ ರೈತರ ಅಭಿರುಚಿ ಮತ್ತು ಕಾಳಜಿ ಸ್ಪಷ್ಟವಾಗುತ್ತದೆ.

4 / 6
ಸಾವಿರಾರು ಜನರು ಬಂಡಿ ಓಟ ನೋಡಲು ಆಗಮಿಸಿ ಕೇಕೆ, ಸಿಳ್ಳೆ, ಚಪ್ಪಾಳೆಗಳಿಂದ ಎತ್ತುಗಳಿಗೆ ಹುಮ್ಮಸ್ಸು ತುಂಬಿದರು. ಅಭಿಮಾನಿಗಳು ಎತ್ತುಗಳ ಜೊತೆಗೆ ಓಡಿ ಉತ್ಸಾಹ ಹೆಚ್ಚಿಸಿದರು. ಈ ಸಂಭ್ರಮ ಗ್ರಾಮೀಣ ಕ್ರೀಡೆಗಳ ಜೀವಂತಿಕೆಯನ್ನು ತೋರಿಸಿತು.

5 / 6
ಇಂತಹ ಸ್ಪರ್ಧೆಗಳು ನಶಿಸಿಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಯುವಜನತೆಗೆ ಈ ಕ್ರೀಡೆಗಳನ್ನು ಪರಿಚಯಿಸುವ ಮೂಲಕ ಪರಂಪರೆ ಮುಂದುವರಿಯುತ್ತಿದೆ. ಡಂಬಳದ ಈ ಕಾರ್ಯಕ್ರಮ ಗ್ರಾಮೀಣ ಸಂಸ್ಕೃತಿಯ ಉಳಿವಿಗೆ ಉತ್ತಮ ಉದಾಹರಣೆಯಾಗಿದೆ.

6 / 6
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ