
ಸ್ಯಾಂಡಲ್ವುಡ್ನ ಕ್ಯೂಟ್ ದಂಪತಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ಇಂದು (ಜೂನ್ 12) ಜನ್ಮದಿನ. ಆ ಪ್ರಯುಕ್ತ ಅವರು ಮಾಲ್ಡೀವ್ಸ್ಗೆ ಪ್ರಯಾಣ ಕೈಗೊಂಡಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಡಾರ್ಲಿಂಗ್ ಕೃಷ್ಣ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಅವರು ಈಗ ಪತ್ನಿ ಜೊತೆ ವಿದೇಶದಲ್ಲಿ ರಜೆಯ ಮಜಾ ಸವಿಯುತ್ತಿದ್ದಾರೆ.

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಅವರು 2021ರ ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇವರಿಬ್ಬರು ಸ್ಯಾಂಡಲ್ವುಡ್ನಲ್ಲಿ ಯಶಸ್ವಿ ಜೋಡಿ ಎನಿಸಿಕೊಂಡಿದ್ದಾರೆ.

‘ಲವ್ ಮಾಕ್ಟೇಲ್’ ಸಿನಿಮಾ ಮೂಲಕ ಮಿಲನಾ ಮತ್ತು ಡಾರ್ಲಿಂಗ್ ಕೃಷ್ಣ ಅವರಿಗೆ ಭರ್ಜರಿ ಗೆಲುವು ಸಿಕ್ಕಿತು. ಬಳಿಕ ‘ಲವ್ ಮಾಕ್ಟೇಲ್ 2’ ಸಿನಿಮಾ ಮಾಡಿ ಇವರಿಬ್ಬರು ಯಶಸ್ಸು ಕಂಡರು. ಸದ್ಯ ಬಹುಬೇಡಿಕೆಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.

ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಕೃಷ್ಣ ನಟನೆಯ ‘ದಿಲ್ ಪಸಂದ್’ ಚಿತ್ರದಿಂದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಆಗಿದೆ. ನಿರ್ದೇಶಕ ಶಶಾಂಕ್ ಜೊತೆ ಕೃಷ್ಣ ಅವರ ಹೊಸ ಚಿತ್ರ ಘೋಷಣೆ ಆಗಿದೆ.
Published On - 2:30 pm, Sun, 12 June 22