- TV9 Kannada Photo gallery Darling Krishna Won batter of the tournament In CCL 2025 Cinema News in Kannada
ಸಿಸಿಎಲ್ನಲ್ಲಿ ರನ್ ಹೊಳೆ ಹರಿಸಿದ ಡಾರ್ಲಿಂಗ್ ಕೃಷ್ಣಗೆ ವಿಶೇಷ ಗೌರವ
ಕನ್ನಡದ ನಟ ಡಾರ್ಲಿಂಗ್ ಕೃಷ್ಣ ಅವರು ಈ ಬಾರಿಯ ಸಿಸಿಎಲ್ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಬ್ಯಾಟ್ನಿಂದ ಈ ಮೊದಲು ಶತಕ ಕೂಡ ಬಂದಿತ್ತು. ಈ ಕಾರಣಕ್ಕೆ ಅವರಿಗೆ ಸಿಸಿಎಲ್ನಲ್ಲಿ ವಿಶೇಷ ಗೌರವ ಸೂಚಿಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ .
Updated on: Mar 03, 2025 | 2:35 PM

ನಟ ಡಾರ್ಲಿಂಗ್ ಕೃಷ್ಣ ಅವರು ಪ್ರತಿ ಬಾರಿ ಸಿಸಿಎಲ್ನಲ್ಲಿ ಮಿಂಚುತ್ತಾರೆ. ಈ ಬಾರಿಯೂ ಅವರು ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಆಸರೆ ಆಗಿ ನಿಂತಿದ್ದಾರೆ. ಈಗ ಸಿಸಿಎಲ್ ಪೂರ್ಣಗೊಂಡಿದ್ದು ಅವರಿಗೆ ವಿಶೇಷ ಗೌರವ ಸಿಕ್ಕಿದೆ.

Darling Krishna (3)

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಪರ ಬ್ಯಾಟ್ ಬೀಸಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಶತಕ ಕೂಡ ಬಾರಿಸಿದ್ದರು. ಹಲವು ಪ್ರಮುಖ ಪಂದ್ಯಗಳಲ್ಲಿ ಅವರಿಂದ ರನ್ ಹೊಳೆಯೇ ಹರಿದಿದೆ. ಈ ಮೂಲಕ ಅವರು ತಂಡದ ಪ್ರಮುಖ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಮಿಲನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಮಗು ಕೂಡ ಜನಿಸಿದೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



