
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ.

ರೇಣುಕಾಸ್ವಾಮಿ ಚಿತ್ರದುರ್ಗದ ನಿವಾಸಿ, ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ. ಅಪೋಲೊ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ.

ಕೊಲೆ ಆಗಿರುವ ರೇಣುಕಾ ಸ್ವಾಮಿ, ಬೆಸ್ಕಾಂ ನಿವೃತ್ತ ನೌಕರ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ. ಈತ ದರ್ಶನ್ ಅಭಿಮಾನಿ ಆಗಿದ್ದ.

ರೇಣುಕಾಸ್ವಾಮಿಗೆ ಕಳೆದ ವರ್ಷವಷ್ಟೆ ಮದುವೆಯಾಗಿತ್ತು. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ.

ರೇಣುಕಾ ಸ್ವಾಮಿ ಭಜರಂಗದಳದಲ್ಲಿಯೂ ಗುರುತಿಸಿಕೊಂಡಿದ್ದ. 3ವರ್ಷದ ಹಿಂದೆ ಭಜರಂಗದಳ ಸುರಕ್ಷಾ ಪ್ರಮುಖ ಆಗಿ ಗುರುತಿಸಿಕೊಂಡಿದ್ದ ರೇಣುಕಾಸ್ವಾಮಿ.

ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿರುವ ಪವಿತ್ರಾ ಬಗ್ಗೆ ಆಕ್ರೋಶ ಹೊಂದಿದ್ದ. ಹಾಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶಗಳ ಕಳಿಸಿದ್ದ.
Published On - 12:18 pm, Tue, 11 June 24