ದರ್ಶನ್​, ವಿಜಯಲಕ್ಷ್ಮೀ, ವಿನೀಶ್; ಹ್ಯಾಪಿ ಫ್ಯಾಮಿಲಿಯ ಫೋಟೋ ನೋಡಿ

Updated on: Jan 15, 2025 | 2:19 PM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಮೈಸೂರಿನ ತಮ್ಮ ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಈ ಸಮಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ಪತ್ನಿ ವಿಜಯಲಕ್ಷ್ಮೀ ಮತ್ತು ಮಗ ವಿನೀಶ್ ಜೊತೆಗಿನ ಚಿತ್ರಗಳು ಅಭಿಮಾನಿಗಳಿಗೆ ಸಂತಸ ತಂದಿವೆ.

1 / 5
ನಟ ದರ್ಶನ್ ಅವರು ಕಳೆದ ಆರು ತಿಂಗಳಲ್ಲಿ ಸಾಕಷ್ಟು ಬೀಳುಗಳನ್ನು ಕಂಡರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಸಾಕಷ್ಟು ತೊಂದರೆ ಅನುಭವಿಸಿದರು. ಈಗ ದರ್ಶನ್ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ.

ನಟ ದರ್ಶನ್ ಅವರು ಕಳೆದ ಆರು ತಿಂಗಳಲ್ಲಿ ಸಾಕಷ್ಟು ಬೀಳುಗಳನ್ನು ಕಂಡರು. ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ಸಾಕಷ್ಟು ತೊಂದರೆ ಅನುಭವಿಸಿದರು. ಈಗ ದರ್ಶನ್ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ.

2 / 5

ದರ್ಶನ್ ಅವರು ಮೈಸೂರಿನ ತಮ್ಮ ಫಾರ್ಮ್​ಹೌಸ್​​ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬವೂ ಇದರಲ್ಲಿ ಭಾಗಿ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5

ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್​ ಜೊತೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋ ನೋಡಿದ ಅನೇಕರು ‘ಹ್ಯಾಪಿ ಫ್ಯಾಮಿಲಿ’ ಎಂದು ಕಮೆಂಟ್ ಮಾಡುತ್ತಾ ಇದ್ದಾರೆ.

4 / 5

ದರ್ಶನ್ ಅವರು ಮಗ ವಿನೀಶ್ ಹಾಗೂ ಸಹೋದರ ದಿನಕರ್ ಜೊತೆ ಪೋಸ್ ಕೊಟ್ಟಿದ್ದಾರೆ. ಅಣ್ಣ-ತಮ್ಮನ ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ವೈರಲ್ ಆಗಿದೆ.

5 / 5

ದರ್ಶನ್ ಅವರು ಬಂಧನ ಆದ ಬಳಿಕ ವಿಜಯಲಕ್ಷ್ಮೀ ಅವರು ಸಾಕಷ್ಟು ಹರಕೆಗಳನ್ನು ಹೊತ್ತಿದ್ದರು. ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ಕೂಡ ಕೊಟ್ಟರು.  ಆ ಹರಕೆ ಫಲ ಕೊಟ್ಟಿದೆ. ದರ್ಶನ್ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ.

Published On - 11:44 am, Wed, 15 January 25

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us