AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ವೈಭವ: ಸಾಂಸ್ಕೃತಿಕ ಕಲರವ, ಫೋಟೋಸ್​ ನೋಡಿ

ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ ಕಳೆಕಟ್ಟಿದೆ. ಸಾವಿರಾರು ಜನ ಪ್ರಯಾಣಿಸುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ವೈಭವ ಅನಾವರಣವಾಗಿದೆ.

ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on: Oct 09, 2024 | 9:32 AM

Share
Dasara 2024: Dasara Vaibhava Celebration in Kempegowda International Airport Bengaluru

ನಾಡಿನ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ನಾಡಹಬ್ಬ ದಸರಾ ಅನ್ನು ಮೈಸೂರಿನಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇತ್ತ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ ಕಳೆಕಟ್ಟಿದೆ.

1 / 6
Dasara 2024: Dasara Vaibhava Celebration in Kempegowda International Airport Bengaluru

ಸಾವಿರಾರು ಜನ ಪ್ರಯಾಣಿಸುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ವೈಭವ ಅನಾವರಣವಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್​ 1 ಹಾಗೂ ಟರ್ಮಿನಲ್​ 2 ನಲ್ಲಿ ದಸರಾ ಹಬ್ಬದ ನಿಮಿತ್ತ ನಾಲ್ಕು ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

2 / 6
Dasara 2024: Dasara Vaibhava Celebration in Kempegowda International Airport Bengaluru

ಡೊಳ್ಳು ಕುಣಿತ, ಗಾರುಡಿ ಕುಣಿತ, ಯಕ್ಷಗಾನ, ತಮಟೆ ವಾದ್ಯ ದೇಶ-ವಿದೇಶಿ ಪ್ರಯಾಣಿಕರ ಕಣ್ಮನ ಸೆಳೆಯುತ್ತಿವೆ. ತಮಟೆ ವಾದ್ಯಕ್ಕೆ ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಕುಣಿದು ಕುಪ್ಪಳಿಸಿದರು.

3 / 6
Dasara 2024: Dasara Vaibhava Celebration in Kempegowda International Airport Bengaluru

ಟರ್ಮಿನಲ್ 2ರಲ್ಲಿ ದಸರಾ ಸಂಭ್ರಮ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದೇಶ ವಿದೇಶದಿಂದ ಬರುತ್ತಿರುವ ಪ್ರಯಾಣಿಕರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡು ಮಸ್ತ್ ಎಂಜಾಯ್ ಮಾಡುತ್ತಿದ್ದಾರೆ.

4 / 6
Dasara 2024: Dasara Vaibhava Celebration in Kempegowda International Airport Bengaluru

ವಿಮಾನ ನಿಲ್ದಾಣದ ಟರ್ಮಿನಲ್ 1 ಹಾಗೂ ಟರ್ಮಿನಲ್ ‌2ರಲ್ಲಿ ದಸರಾ ಬೊಂಬೆಗಳನ್ನು ಇರಿಸಲಾಗಿದೆ. ನಮ್ಮ ನಾಡಿನ ಸಂಸ್ಕೃತಿಯನ್ನು ಪರಂಪರೆಗಳ ಬಿಂಬಿಸುವ ಬೊಂಬೆಗಳು ಪ್ರಯಾಣಿಕರನ್ನು ಆಕರ್ಷಿಸುತ್ತಿವೆ.

5 / 6
Dasara 2024: Dasara Vaibhava Celebration in Kempegowda International Airport Bengaluru

ಪ್ರಯಾಣಿಕರು ಬೊಂಬೆಗಳ ಬಳಿ ನಿಂತು ಪ್ರಯಾಣಿಕರು ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು. ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೆಲ ಹೊತ್ತು ಕಂಡು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

6 / 6
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us