ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ದಸರಾ ಕಲರವ; ರಾಜ ಪೋಷಾಕಿನಲ್ಲಿ ಮಿಂಚಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 03, 2024 | 6:00 PM

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಈಗಾಗಗಲೇ ಚಾಲನೆ ನೀಡಲಾಗಿದ್ದು, ಅರಮನೆಯಲ್ಲಿ ದಸರಾ ಕಲರವ ಕಳೆಗಟ್ಟಿದೆ. ಇತ್ತ ಖಾಸಗಿ ದರ್ಬಾರ್ ರಂಗೇರಿದ್ದು, ರಾಜ ಪೋಷಾಕಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಿಂಚಿದ್ದಾರೆ. ಜೊತೆಗೆ ಸಿಂಹಾಸಾನವೇರಿ ದರ್ಬಾರ್ ನಡೆಸಿದರು. ಈ ಕುರಿತು ಒಂದು ವರದಿ ಇಲ್ಲಿದೆ.

1 / 7
ರಾಜಾಧೀರಾಜಾ ರಾಜ ಮಾರ್ತಾಂಡ ರಾಜ ಕುಲತಿಲಕ ಯದುವೀರ್​ ಪರಾಕ್, ಬಹು ಪರಾಕ್​. ಹೀಗೆ ವಂಧಿ ಮಾಗಧರು ಬಹುಪರಾಕ್​ ಕೂಗುತ್ತಿದ್ದರೆ, ಇತ್ತ ರಾಜಗಾಂಭೀರ್ಯ ನಡಿಗೆಯಲ್ಲಿ ಯದುವಂಶದ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮಿಸಿದರು. ಇದು ಇವತ್ತು ಮೈಸೂರಿನಲ್ಲಿ ನಡೆದ ದಸರಾ ಖಾಸಗಿ ದರ್ಬಾರ್​ನ ಝಲಕ್.

2 / 7
ಇವತ್ತಿನಿಂದ ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಆರಂಭವಾಗಿದೆ. ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರು ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಖಾಸಗಿ ದರ್ಬಾರ್ ನಡೆಸಲಾಗುತ್ತದೆ. ಅದರಂತೆ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ಖಾಸಗಿ ದರ್ಬಾರ್ ನಡೆಸಿದರು.

3 / 7
ರಾಜಾ ಪೋಷಾಕು ಧರಿಸಿದ ಯದುವೀರ್​ ದರ್ಬಾರ್ ಹಾಲ್ ಪ್ರವೇಶಿಸುತ್ತಿದ್ದಂತೆ, ವಂಧಿ ಮಾಗಧರು ಬಹು ಪರಾಕ್ ಕೂಗಿದರು. ಸಿಂಹಾಸನದ ಬಳಿ ತೆರಳಿದ ಯದುವೀರ್​​, ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು. ಬಳಿಕ ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು.

4 / 7
ಇದಾದ ನಂತರ ಅವರು ಸಿಂಹಾಸನಾರೂಢರಾದರು.ಇದೇ ವೇಳೆ ಪತ್ನಿ ತ್ರಿಷಿಕಾಕುಮಾರಿ ಯದುವೀರ ಪಾದಪೂಜೆ ಮಾಡಿದರು. ಪತ್ನಿ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿ ವಂದಿಸಿದರು. ನಂತರ ಅರಮನೆಯ ದೇವಸ್ಥಾನಗಳು, ಚಾಮುಂಡಿಬೆಟ್ಟ, ಉತ್ತನಹಳ್ಳಿ ಬೆಟ್ಟ ಸೇರಿದಂತೆ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದವನ್ನು ಒಡೆಯರ್​ಗೆ ನೀಡಲಾಯ್ತು. ಎಲ್ಲ ಪ್ರಸಾದವನ್ನು ಶ್ರದ್ದಾ ಭಕ್ತಿಯಿಂದ ಯದುವೀರ್ ಸ್ವೀಕರಿಸಿದ್ರು.

5 / 7
ನಂತರ ಮೈಸೂರು ರಾಜ್ಯ ಗೀತೆಯನ್ನು ನುಡಿಸಲಾಯ್ತು. ಈ ವೇಳೆ ರತ್ನ ಖಚಿತ ಸಿಂಹಾಸನದ ಮೇಲೆ ನಿಂತ ಯದುವೀರ್​, ಸೆಲ್ಯೂಟ್​ ಮಾಡಿ ರಾಜ್ಯ ಗೀತೆಗೆ ಗೌರವ ಸಲ್ಲಿಸಿದರು. ರಾಜ್ಯ ಗೀತೆ ಮುಗಿದ ನಂತರ ಸಿಂಹಾಸನದಿಂದ ಇಳಿದು ಖಾಸಗಿ ದರ್ಬಾರನ್ನು ಮುಕ್ತಾಯಗೊಳಿಸಿದರು.

6 / 7
 ಇನ್ನು ಯದುವೀರ್​ ಅವರು ಖಾಸಗಿ ದರ್ಬಾರ್ ನಡೆಸುವ ಮುನ್ನ ಅರಮನೆಯಲ್ಲಿ ಬೆಳಗಿನ ಜಾವದಿಂದಲೇ ಪೂಜಾ ವಿಧಿ ವಿಧಾನಗಳು ಜರುಗಿದವು. ಮಂಗಳ ಸ್ನಾನ ನೆರವೇರಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಯದುವೀರ್​ ಕಂಕಣ ಕಟ್ಟಿಕೊಂಡರು. ಈ ವೇಳೆ ಅರಮನೆಯ ಕೊಡಿ ಸೋಮೇಶ್ವರ ದೇವಾಲಯದಿಂದ ಪಟ್ಟದ ಆನೆ, ಹಸು, ಕುದುರೆ, ಜೊತೆ ಆಗಮಿಸಿದ ಮುತ್ತೈದೆಯರು ಕಳಸ ತೆಗೆದುಕೊಂಡು ಸಾಗಿದರು.

7 / 7
ಸುಮಾರು 1 ಗಂಟೆಗಳ ಕಾಲ ಮೈಸೂರು ಅರಮನೆಯಲ್ಲಿ ಗತಕಾಲದ ವೈಭವ ಮರುಕಳಿಸಿತ್ತು. ಆದ್ರೆ, ಖಾಸಗಿ ಕಾರ್ಯಕ್ರಮವಾದ್ದರಿಂದ ಸಾರ್ವಜನಿಕರಿಗೆ ಅರಮನೆ‌ ಪ್ರವೇಶ ನಿಷೇಧ ಮಾಡಲಾಗಿತ್ತು. ಒಟ್ಟಾರೆ ಮೈಸೂರು ಅರಮನೆಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು, ಈ‌ ಮೂಲಕ ದಸರಾ ದರ್ಬಾರ್ ಆರಂಭವಾಗಿದೆ.