ನಾಡಹಬ್ಬ ಮೈಸೂರು ದಸರಾಕ್ಕೆ ಕೌಂಟ್ಡೌನ್ ಶುರುವಾಗಿದೆ. ದಸರಾ ಉದ್ಘಾಟನೆಗೆ ಇನ್ನು ಎರಡೇ ದಿನ ಬಾಕಿ ಉಳಿದಿದ್ದು, ಈಗಾಗಲೇ ದಸರಾ ಆಚರಣೆಗೆ ಭರ್ಜರಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಆದ್ರೆ, ದಸರಾ ಆರಂಭಕ್ಕೂ ಮುನ್ನ ಅವಘಡವೊಂದು ಸಂಭವಿಸಿದೆ.
ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಿಂದ ವಿದ್ಯುತ್ ದೀಪಾಲಂಕಾರದ ಕಂಬ ಉರುಳಿಬಿದ್ದಿರುವ ಘಟನೆ ನಡೆದಿದೆ.
ಅಪಘಾತ ವೇಳೆ ಬಸ್ವೊಂದು ದಸರಾ ದೀಪಾಲಂಕಾರ ಕಮಾನಿಗೆ ಗುದ್ದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಘಟನೆ ನಡೆದಿದೆ.
ವಿದ್ಯುತ್ ದೀಪಾಲಂಕಾರಕ್ಕಾಗಿ ಬೆಂಗಳೂರು ಮೈಸೂರು ರಿಂಗ್ ರಸ್ತೆ ಬಳಿ ಹಾಕಲಾಗಿದ್ದ ವಿದ್ಯುತ್ ಕಮಾನು ಬಿದಿದೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗ ಜಖಂಗೊಂಡಿದೆ.
ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಅಪಘಾತ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸಮಸ್ಯೆಯಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರಸಿಂಹರಾಜ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.