ಸೆಲೆಬ್ರಿಟಿಗಳ ಮನೆಯಲ್ಲಿ ದೀಪಾವಳಿ ಸಡಗರ; ಫೋಟೋ ಮೂಲಕ ಹಬ್ಬದ ಶುಭಾಶಯ

Updated on: Nov 08, 2026 | 6:43 PM

ದೇಶದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಸೆಲೆಬ್ರಿಟಿಗಳು ಕೂಡ ಹಬ್ಬದ ಸಡಗರದಲ್ಲಿ ಪಾಲ್ಗೊಂಡಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಹಬ್ಬ ಆಚರಿಸಲಾಗುತ್ತಿದೆ. ರಾಮ್ ಚರಣ್, ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ. ಫೋಟೋ ನೋಡಿ..

1 / 5
ನಟಿ ಪ್ರಿಯಾಂಕಾ ಚೋಪ್ರಾ ಅವರು ವಿದೇಶದಲ್ಲಿ ನೆಲೆಸಿದ್ದರೂ ಕೂಡ ಭಾರತದ ಹಬ್ಬಗಳನ್ನು ಮರೆತಿಲ್ಲ. ಎಲ್ಲ ಹಬ್ಬವನ್ನು ಕೂಡ ಅವರು ಸಡಗರದಿಂದ ಆಚರಿಸುತ್ತಾರೆ. ಕುಟುಂಬದ ಜೊತೆ ಅವರು ದೀಪಾವಳಿ ಹಬ್ಬ ಆಚರಿಸಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಅವರು ವಿದೇಶದಲ್ಲಿ ನೆಲೆಸಿದ್ದರೂ ಕೂಡ ಭಾರತದ ಹಬ್ಬಗಳನ್ನು ಮರೆತಿಲ್ಲ. ಎಲ್ಲ ಹಬ್ಬವನ್ನು ಕೂಡ ಅವರು ಸಡಗರದಿಂದ ಆಚರಿಸುತ್ತಾರೆ. ಕುಟುಂಬದ ಜೊತೆ ಅವರು ದೀಪಾವಳಿ ಹಬ್ಬ ಆಚರಿಸಿದ್ದಾರೆ.

2 / 5

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿ ಪಾಲಿಗೆ ಈ ಬಾರಿಯ ದೀಪಾವಳಿ ವಿಶೇಷ ಆಗಿದೆ. ಮಗ ವಿಹಾನ್​ನ ಒಂದು ವರ್ಷದ ಹುಟ್ಟುಹಬ್ಬ ಹಾಗೂ ದೀಪಾವಳಿ ಹಬ್ಬ ಒಟ್ಟಿಗೆ ಬಂದಿರುವುದರಿಂದ ಅವರ ಮನೆಯಲ್ಲಿ ಸಂಭ್ರಮ ಹೆಚ್ಚಿದೆ.

3 / 5

ಬಾಲಿವುಡ್​ನ ಖ್ಯಾತ ನಟ ಸಿದ್ದಾರ್ಥ್ ಮಲ್ಹೋತ್ರಾ ಅವರು ಸಿಹಿ ತಿಂಡಿಯ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ. ಕಮೆಂಟ್ ಮಾಡಿರುವ ಅಭಿಮಾನಿಗಳು ನಟನಿಗೆ ಶುಭಾಶಯ ತಿಳಿಸಿದ್ದಾರೆ.

4 / 5

ನಟಿ ತಮನ್ನಾ ಭಾಟಿಯಾ ಅವರು ಬಹಳ ಶ್ರದ್ಧೆಯಿಂದ ದೀಪಗಳನ್ನು ಹಚ್ಚಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಪೂಜೆಯಲ್ಲಿ ಅವರು ಭಾಗಿಯಾಗಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

5 / 5

ನಟಿಯರಾದ ಕರೀನಾ ಕಪೂರ್, ಕರೀಷ್ಮಾ ಕಪೂರ್ ಅವರ ಕುಟುಂಬದಲ್ಲಿ ಕೂಡ ಹಬ್ಬದ ಸಂಭ್ರಮ ಮನೆ ಮಾಡಿದೆ. ಫ್ಯಾಮಿಲಿ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us