Kannada News Photo gallery Deepika Padukone and Shah Rukh Khan starrer Pathaan movie second song Jhoome Jo song becomes super hit
Jhoome Jo Pathaan: ‘ಪಠಾಣ್’ ಚಿತ್ರದ 2ನೇ ಹಾಡಿನಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮಿಂಚಿಂಗ್
TV9 Web | Updated By: ಮದನ್ ಕುಮಾರ್
Updated on:
Dec 22, 2022 | 7:23 PM
Deepika Padukone | Shah Rukh Khan: ಹಾಡುಗಳ ಮೂಲಕ ‘ಪಠಾಣ್’ ಚಿತ್ರ ಧೂಳೆಬ್ಬಿಸುತ್ತಿದೆ. ಈ ಸಿನಿಮಾದ 2ನೇ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
1 / 6
ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಮೇಲೆ ಇರುವ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಇದು ಈ ಜೋಡಿಯ 4ನೇ ಸಿನಿಮಾ ಎಂಬುದು ವಿಶೇಷ.
2 / 6
‘ಪಠಾಣ್’ ಚಿತ್ರದ ‘ಬೇಷರಂ ರಂಗ್..’ ಹಾಡು ವಿವಾದಕ್ಕೆ ಒಳಗಾದ ಬೆನ್ನಲ್ಲೇ ಈಗ ಎರಡನೇ ಹಾಡನ್ನು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಸಾಂಗ್ ಇಷ್ಟವಾಗುತ್ತಿದೆ. ಯೂಟ್ಯೂಬ್ನಲ್ಲಿ ಸಖತ್ ಸದ್ದು ಮಾಡುತ್ತಿದೆ.
3 / 6
‘ಜೂಮೇ ಜೋ ಪಠಾಣ್..’ ಎಂಬ ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಅವರ ಡ್ಯಾನ್ಸ್ ಕಂಡು ಅಭಿಮಾನಿಗಳು ವಾವ್ ಎನ್ನುತ್ತಿದ್ದಾರೆ. ಈ ಗೀತೆಯಿಂದಾಗಿ ಸಿನಿಮಾ ಮೇಲಿನ ಹೈಪ್ ಹೆಚ್ಚಿದೆ.
4 / 6
‘ಪಠಾಣ್’ ಚಿತ್ರದ 2ನೇ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ತುಂಬ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಗೆಟಪ್ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.
5 / 6
2023ರ ಜನವರಿ 25ರಂದು ‘ಪಠಾಣ್’ ಸಿನಿಮಾ ರಿಲೀಸ್ ಆಗಲಿದೆ. ನಾಲ್ಕು ವರ್ಷಗಳ ಬಳಿಕ ಶಾರುಖ್ ಖಾನ್ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಲಿರುವುದರಿಂದ ಚಿತ್ರದ ಮೇಲಿನ ನಿರೀಕ್ಷೆ ಜೋರಾಗಿದೆ.
6 / 6
ಈ ಸಿನಿಮಾಗೆ ಸಿದ್ದಾರ್ಥ್ ಆನಂದ್ ಅವರು ನಿರ್ದೇಶನ ಮಾಡಿದ್ದಾರೆ. ಅದ್ದೂರಿ ಬಜೆಟ್ನಲ್ಲಿ ಮೂಡಿಬಂದ ಈ ಚಿತ್ರವನ್ನು ಹಲವು ದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಸದ್ಯಕ್ಕಂತೂ ಹಾಡುಗಳ ಮೂಲಕ ‘ಪಠಾಣ್’ ಧೂಳೆಬ್ಬಿಸುತ್ತಿದೆ.
Published On - 7:20 pm, Thu, 22 December 22