Besharam Rang: ಹೊಸ ಹಾಡಿನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Deepika Padukone | Pathaan Movie Song: ‘ಬೇಷರಂ ರಂಗ್..’ ಗೀತೆಯನ್ನು ಗ್ಲಾಮರಸ್ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.
Updated on:Dec 12, 2022 | 3:02 PM

Deepika Padukone looks hot in Besharam Rang song from Pathaan movie

Deepika Padukone looks hot in Besharam Rang song from Pathaan movie

‘ಪಠಾಣ್’ ಸಿನಿಮಾದ ಮೊದಲ ಹಾಡು ‘ಬೇಷರಂ ರಂಗ್..’ ಬಿಡುಗಡೆ ಆಗಿದೆ. ಈ ಗೀತೆಯನ್ನು ಗ್ಲಾಮರಸ್ ಆಗಿ ಚಿತ್ರಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ತುಂಬ ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

ಶಾರುಖ್ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್ ಪ್ಯಾಕ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಝಲಕ್ ಕೂಡ ಈ ಹಾಡಿನಲ್ಲಿ ಹೈಲೈಟ್ ಆಗಿದೆ.

2023ರ ಜನವರಿ 25ರಂದು ‘ಪಠಾಣ್’ ಚಿತ್ರ ರಿಲೀಸ್ ಆಗಲಿದೆ. ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.
Published On - 3:02 pm, Mon, 12 December 22

TV9 Kannada
Read More



