- TV9 Kannada Kannada News Photos Devi movie Chethan Gowda celebrates meaningful Deepavali with Prakaramikarmikas
ಅರ್ಥಪೂರ್ಣವಾಗಿ ದೀಪಾವಳಿ ಹಬ್ಬ ಆಚರಣೆ ಮಾಡಿದ ‘ದೇವಿ’ ಚಿತ್ರತಂಡ
‘ದೇವಿ’ ಚಿತ್ರತಂಡದವರು ಈ ವರ್ಷದ ದೀಪಾವಳಿ ಹಬ್ಬವನ್ನ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಪೌರಕಾರ್ಮಿಕರಿಗೆ ಉಡುಗೊರೆ ಹಾಗೂ ಇಡೀ ಚಿತ್ರತಂಡಕ್ಕೆ ಹಬ್ಬದ ಬೋನಸ್ ನೀಡುವ ಮೂಲಕ ನಟ, ನಿರ್ಮಾಪಕ ಚೇತನ್ ಗೌಡ ಅವರು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದ್ದಾರೆ. ಆ ಸಂದರ್ಭದ ಕೆಲವು ಫೋಟೋಗಳು ಇಲ್ಲಿವೆ ನೋಡಿ..
Updated on: Nov 10, 2026 | 1:02 PM

ಕನ್ನಡ ಚಿತ್ರರಂಗದಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ‘ದೇವಿ’ ಸಿನಿಮಾದ ನಿರ್ಮಾಪಕ, ನಾಯಕ ನಟ, ಯುವ ರೈತ ಚೇತನ್ ಗೌಡ ಅವರು ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಹಬ್ಬ ಆಚರಿಸಿದ್ದಾರೆ.

ರೈತ ಕುಟುಂಬದಿಂದ ಬಂದಿರುವ ಚೇತನ್ ಅವರು ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಹಾಗೂ ಸಿಹಿ ಹಂಚುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಅವರಿಗೆ ‘ದೇವಿ’ ಚಿತ್ರತಂಡದವರು ಸಾಥ್ ನೀಡಿದ್ದಾರೆ.

‘ದೇವಿ’ ಸಿನಿಮಾಗಾಗಿ ದುಡಿಯುತ್ತಿರುವ ಎಲ್ಲರಿಗೂ ಚೇತನ್ ಅವರು ಬೋನಸ್ ಕೊಡುವ ಮೂಲಕ ಚಿತ್ರರಂಗದಲ್ಲಿ ಮಾದರಿಯಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2027ರ ಮಾರ್ಚ್ ವೇಳೆಗೆ ‘ದೇವಿ’ ತೆರೆಕಾಣಲಿದೆ.

ನಟ ಚೇತನ್, ನಟಿ ಭವ್ಯಾ ಗೌಡ, ನಿರ್ದೇಶಕ ಪ್ರಕಾಶ್, ಸಂಗೀತ ನಿರ್ದೇಶಕ ಶ್ರೀಧರ್ ವಿ. ಸಂಭ್ರಮ್, ಸಂಭಾಷಣೆಕಾರ ಮಾಸ್ತಿ ಸೇರಿದಂತೆ ಇಡೀ ಚಿತ್ರತಂಡದವರು ಒಟ್ಟಿಗೆ ಸೇರಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.

ಈ ಚಿತ್ರಕ್ಕೆ ಮಂಡ್ಯದಲ್ಲಿ ಮುಂದಿನ ಹಂತದ ಚಿತ್ರೀಕರಣ ಶುರುವಾಗಲಿದೆ. ಅದೇ ಕೊನೆಯ ಹಂತದ ಚಿತ್ರೀಕರಣ ಆಗಿರಲಿದೆ. ‘ಸಿಆರ್ ಪ್ರೊಡಕ್ಷನ್ಸ್’ ಬ್ಯಾನರ್ ಮೂಲಕ ಚೇತನ್ ಅವರೇ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



