AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Youth Festival: ರಾಷ್ಟ್ರೀಯ ಯುವಜನೋತ್ಸವದಲ್ಲಿ ಗಮನಸೆಳೆದ ಕಲಾ ಶಿಬಿರ

ಕಳೆದ ಮೂರು ದಿನಗಳಿಂದ ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನವನ ಯುವ ಕಲಾವಿದರ ಸಂಗಮವಾಗಿತ್ತು. ಭಾರತ @ 2047 ಪರಿಕಲ್ಪನೆ ಆಧಾರದ ಮೇಲೆ ಯುವ ಚಿತ್ರಕಲಾವಿದರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

TV9 Web
| Edited By: |

Updated on:Jan 15, 2023 | 6:46 PM

Share
Dharwad Karnataka University National Youth Festival Art camp attracts attention Dharwad News news kannada

ಕಳೆದ ಮೂರು ದಿನಗಳಿಂದ ಕರ್ನಾಟಕ ವಿಶ್ವವಿದ್ಯಾಲಯದ ಹಸಿರು ಉದ್ಯಾನವನ ಯುವ ಕಲಾವಿದರ ಸಂಗಮವಾಗಿತ್ತು. 26ನೇ ರಾಷ್ಟ್ರೀಯ ಯುವಜನ ಮೇಳದಲ್ಲಿ ಮಣ್ಣಿನಲ್ಲಿ ಮೇಕ್ ಇನ್ ಇಂಡಿಯಾ ಮೂಡಿ ಬಂದರೆ, ಚಿತ್ರಕಲೆಯಲ್ಲಿ ಭವಿಷ್ಯದ ಭಾರತ ಗೋಚರವಾಗಿತ್ತು. ಭಾರತ @ 2047 ಪರಿಕಲ್ಪನೆ ಆಧಾರದ ಮೇಲೆ ಯುವ ಚಿತ್ರಕಲಾವಿದರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

1 / 5
Dharwad Karnataka University National Youth Festival Art camp attracts attention Dharwad News news kannada

ಮೂರು ದಿನಗಳ ಕಾಲ ಮೂರು ಹಂತದಲ್ಲಿ ನಡೆದ ಸ್ಪರ್ಧೆಯಲ್ಲಿ ಎರಡು ದಿನ ಫ್ರಿ ಹ್ಯಾಂಡ್ ಹಾಗೂ ಒಂದು ದಿನ ಪರಿಕಲ್ಪನೆ ಆಧಾರಿತವಾಗಿ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು. ಮೆಟ್ರೊ, ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನದ ಮುಂದುವರಿಕೆ, ವಿಶ್ವಗುರು ಭಾರತ, ಗ್ರೀನ್ ಇಂಡಿಯಾ, ಡಿಜಿಟಲ್ ಇಂಡಿಯಾದಂತಹ ಪರಿಕಲ್ಪನೆಗಳು ದೃಶ್ಯಕಲೆಯ ಮೂಲಕ ಅನಾವರಣಗೊಂಡವು.

2 / 5
Dharwad Karnataka University National Youth Festival Art camp attracts attention Dharwad News news kannada

ಮೇಕ್ ಇನ್ ಇಂಡಿಯಾದ ಲಾಂಛನವಾದ ಸಿಂಹ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ, ಕ್ರೀಡೆ, ಭಾರತದ ಭೂಪಟ, ಬುದ್ಧ, ನರೇಂದ್ರ ಮೋದಿ ಅವರ ಮುಖ ಮುಂತಾದವುಗಳು ಕಲಾವಿದರ ಪರಿಕಲ್ಪನೆಗಳಾಗಿ ಹೊರಹೊಮ್ಮಿದವು. ಈ ಕಲಾವಿದರು ತಮ್ಮ ಮನದಾಳದಲ್ಲಿ ಮೂಡುವ ಕಲ್ಪನೆಗಳಿಗೆ ಜೀವ ತುಂಬುವ ಕಾರ್ಯದಲ್ಲಿ ಉತ್ಸುಕತೆಯಿಂದ ಮಗ್ನರಾಗಿರುವುದು ನೋಡುವವರಲ್ಲಿಯೂ ಸಹ ಉತ್ಸಾಹ ತುಂಬುವಂತಿತ್ತು.

3 / 5
Dharwad Karnataka University National Youth Festival Art camp attracts attention Dharwad News news kannada

ವಿಶಾಲವಾದ ಹಸಿರು ಹುಲ್ಲಿನ ಹಾಸಿಗೆಯ ಮೇಲೆ ನಿಂತ ಕಲಾವಿದರಿಂದ ನಿರ್ಮಾಣವಾದ ಮಣ್ಣಿನ ಕಲಾಕೃತಿಗಳಂತೂ ನೋಡುಗರನ್ನು ಕೈ ಮಾಡಿ ಕರೆಯುತ್ತಿದ್ದವು.‌ ದೇಶದ ವಿವಿಧ ರಾಜ್ಯಗಳ ವಿಶ್ವವಿದ್ಯಾಲಯಗಳಿಂದ ಆಗಮಿಸಿದ ಕಲಾವಿದರು ಈ ಸ್ಪರ್ಧೆಗಳಲ್ಲಿ ತಮ್ಮ ಕೈಚಳಕ ಪ್ರದರ್ಶಿಸಿದರು. ಮಣ್ಣಿನ ಕಲಾಕೃತಿಗಾಗಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ನೀಡಲಾಗಿದ್ದು, ಕಲಾವಿದರಿಗೆ ಮೂರು ದಿನಗಳ ಸಮಯಾವಕಾಶ ನೀಡಲಾಗಿತ್ತು.

4 / 5
Dharwad Karnataka University National Youth Festival Art camp attracts attention Dharwad News news kannada

ಇನ್ನು ಛಾಯಾಚಿತ್ರಗಾರರಿಗೆ ಪೂರ್ತಿ ಯುವಜನೋತ್ಸವದ ಕಾರ್ಯಕ್ರಮಗಳನ್ನೇ ವಿಷಯವಾಗಿ ನೀಡಲಾಗಿತ್ತು. ಎಲ್ಲ ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಯುವ ಕಲಾವಿದರ ಶಿಬಿರ ಕೇವಲ ಯುವಜನೋತ್ಸವದ ಸ್ಪರ್ಧಾಳುಗಳಿಗೆ ಮಾತ್ರವಲ್ಲದೇ ಇದೇ ಮೊದಲ ಬಾರಿಗೆ ಸ್ಥಳೀಯ ಕಲಾವಿದರಿಗೂ ತಮ್ಮ ಕಲಾಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಿದ್ದು ವಿಶೇಷ. ಅನ್ಯ ರಾಜ್ಯಗಳ 108 ಕಲಾವಿದರು ಹಾಗೂ ಸ್ಥಳೀಯ 130ಕ್ಕೂ ಅಧಿಕ ಕಲಾವಿದರು ಚಿತ್ರಕಲೆ, ಮಣ್ಣಿನ ಕಲಾಕೃತಿ ಹಾಗೂ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪಾಲ್ಗೊಂಡರು. (ವರದಿ: ನರಸಿಂಹಮೂರ್ತಿ ಪ್ಯಾಟಿ, ಟಿವಿ9 ಧಾರವಾಡ)

5 / 5

Published On - 6:43 pm, Sun, 15 January 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ