
ನಟ ಧ್ರುವ ಸರ್ಜಾ ಅವರಿಗೆ ಅಕ್ಟೋಬರ್ ತಿಂಗಳಲ್ಲಿ ಮಗಳು ಜನಿಸಿದ್ದಳು. ಧ್ರುವ ಅವರು ಮಗಳ ಮುಖವನ್ನು ರಿವೀಲ್ ಮಾಡಿರಲಿಲ್ಲ. ಈಗ ಅವರು ಮಗಳ ಮುಖ ತೋರಿಸಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಮಗಳು ಹುಟ್ಟಿದ ವಿಚಾರವನ್ನು ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ರಿವೀಲ್ ಮಾಡಿದ್ದರು. ಈಗ ಇದೇ ಮೊದಲ ಬಾರಿಗೆ ಮಗುವಿನ ಫೋಟೋ ರಿವೀಲ್ ಆಗಿದೆ.

ಮಗಳಿಗೆ ಧ್ರುವ ಹಾಗೂ ಪ್ರೇರಣಾ ದಂಪತಿ ಇನ್ನೂ ಹೆಸರಿಟ್ಟಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್‌ಡೇಟ್ ಹಂಚಿಕೊಳ್ಳುತ್ತೇನೆ ಎಂದು ಧ್ರುವ ಸರ್ಜಾ ಬರೆದುಕೊಂಡಿದ್ದಾರೆ.

ಧ್ರುವ ಸರ್ಜಾ ಅವರು ಮಗಳ ಫೋಟೋ ಹಂಚಿಕೊಂಡು ಸರ್ಪ್ರೈಸ್ ನೀಡಿರುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.