AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes Control Tips: ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಈ ಜ್ಯೂಸ್​ಗಳು ಉತ್ತಮ

ಮಧುಮೇಹಿಗಳು ತಾವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಕೆಲವು ರೀತಿಯ ಜ್ಯೂಸ್ ಅನ್ನು ಪ್ರತಿದಿನ ಸೇವಿಸಬಹುದು. ಇವು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತವೆ.

ಗಣಪತಿ ಶರ್ಮಾ
|

Updated on: Jun 09, 2023 | 8:13 AM

Share
diabetes control tips in Kannada these green juices help to reduce blood sugar levels

ಪ್ರಸಕ್ತ ಕಾಲದಲ್ಲಿ ಕೆಟ್ಟ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಸೇವನೆಯಿಂದ ಮಧುಮೇಹಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಆದಾಗ್ಯೂ, ಕೆಲವು ವಿಧದ ಜ್ಯೂಸ್​ಗಳನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಅಲ್ಲದೆ, ಈ ಜ್ಯೂಸ್​​ಗಳು ದಿನವಿಡೀ ನಿಮ್ಮನ್ನು ಹೈಡ್ರೇಟ್ ಆಗಿರಿಸಲು ಸಹಾಯ ಮಾಡುತ್ತವೆ.

1 / 5
diabetes control tips in Kannada these green juices help to reduce blood sugar levels

ಪಾಲಕ್ ಸೊಪ್ಪಿನ ಜ್ಯೂಸ್: ಇದರಲ್ಲಿ ಲ್ಯೂಟಿನ್ ಎಂಬ ವಸ್ತುವಿದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಈ ಜ್ಯೂಸ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆಯಾಸ ಮತ್ತು ದೌರ್ಬಲ್ಯವನ್ನು ಹೋಗಲಾಡಿಸುತ್ತದೆ. ದಿನವಿಡೀ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಈ ರಸವು ದೇಹದಲ್ಲಿ ರಕ್ತವನ್ನು ಹೆಚ್ಚಿಸುತ್ತದೆ. ಪಾಲಕ್ ಸೊಪ್ಪಿನ ಜ್ಯೂಸ್ ಕುಡಿಯುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ.

2 / 5
diabetes control tips in Kannada these green juices help to reduce blood sugar levels

ಅಲೋವೆರಾ ಜ್ಯೂಸ್: ವಿಟಮಿನ್ ಸಿ ಮತ್ತು ಇ ಅನ್ನು ಹೊಂದಿರುತ್ತದೆ. ಇದು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲೋವೆರಾ ಜ್ಯೂಸ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಅಲೋವೆರಾ ಜ್ಯೂಸ್ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

3 / 5
diabetes control tips in Kannada these green juices help to reduce blood sugar levels

ಸೋರೆಕಾಯಿ ಜ್ಯೂಸ್: ಸೋರೆಕಾಯಿ ಜ್ಯೂಸ್ ಮಧುಮೇಹ ರೋಗಿಗಳಿಗೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಇದು ಸಮೃದ್ಧ ನಾರಿನಂಶ ಒಳಗೊಂಡಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದರ ರಸವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

4 / 5
diabetes control tips in Kannada these green juices help to reduce blood sugar levels

ಹಾಗಲಕಾಯಿ ಜ್ಯೂಸ್: ಹಾಗಲಕಾಯಿ ರಸ ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ಕಣ್ಣಿಗೆ ತುಂಬಾ ಒಳ್ಳೆಯದು. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ಹಾಗಲಕಾಯಿ ಜ್ಯೂಸ್ ಕುಡಿಯುವುದರಿಂದ ಚರ್ಮವು ಆರೋಗ್ಯಕರವಾಗಿ ಮತ್ತು ಹೊಳೆಯುತ್ತದೆ.

5 / 5
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್