Updated on: Mar 25, 2022 | 9:22 PM
ನಟಿ ದಿಶಾ ಪಟಾನಿ ಅವರು ಬಾಲಿವುಡ್ನಲ್ಲಿ ಸಖತ್ ಬೇಡಿಕೆ ಹೊಂದಿದ್ದಾರೆ. ಅನೇಕ ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಫಿಟ್ನೆಸ್ ಬಗ್ಗೆ ದಿಶಾ ಪಟಾನಿಗೆ ಎಲ್ಲಿಲ್ಲದ ಕಾಳಜಿ.
ಪ್ರತಿ ದಿನ ಜಿಮ್ನಲ್ಲಿ ವರ್ಕೌಟ್ ಮಾಡುವ ಅವರು ಬಳುಕುವ ಬಳ್ಳಿಯಂತೆ ತಮ್ಮ ದೇಹವನ್ನು ಫಿಟ್ ಆಗಿ ಇಟ್ಟುಕೊಂಡಿದ್ದಾರೆ. ಆಗಾಗ ಫೋಟೋಶೂಟ್ ಮಾಡಿಸುವ ಮೂಲಕ ಮಿಂಚುತ್ತಾರೆ. ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾರೆ.
ಈಗ ದಿಶಾ ಪಟಾನಿ ಅಪ್ಲೋಡ್ ಮಾಡಿಕೊಂಡಿರುವ ಒಂದು ಫೋಟೋ ಸಿಕ್ಕಾಪಟ್ಟೆ ಹಾಟ್ ಆಗಿದೆ. ಇದನ್ನು ನೋಡಿದ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
2015ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಶಾ ಪಟಾನಿ ಅವರು ನಟಿಸಿರುವುದು ಕೆಲವೇ ಸಿನಿಮಾಗಳಲ್ಲಿ ಮಾತ್ರ. ಹಾಗಿದ್ದರೂ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ‘ಎಂ.ಎಸ್. ಧೋನಿ: ದಿ ಅಲ್ ಟೋಲ್ಡ್ ಸ್ಟೋರಿ’, ‘ಬಾಘಿ’ ಮುಂತಾದ ಸಿನಿಮಾಗಳಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ರಾಯಭಾರಿ ಆಗಿದ್ದಾರೆ.
ದಿಶಾ ಪಟಾನಿ ಅವರು ನಟ ಟೈಗರ್ ಶ್ರಾಫ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬುದು ಮೊದಲಿನಿಂದಲೂ ಕೇಳಿಬರುತ್ತಿರುವ ಸುದ್ದಿ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ಆದರೆ ತಮ್ಮಿಬ್ಬರ ಪ್ರೀತಿಯನ್ನು ಅವರು ಈವರೆಗೆ ಬಹಿರಂಗವಾಗಿ ಹೇಳಿಕೊಂಡಿಲ್ಲ.