
ಖ್ಯಾತ ನಟಿ ದಿಶಾ ಪಟಾನಿ ಅವರಿಗೆ ಬಾಲಿವುಡ್ನಲ್ಲಿ ಸಖತ್ ಬೇಡಿಕೆ ಇದೆ. ಸ್ಟಾರ್ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಫಿಟ್ನೆಸ್ ವಿಚಾರದಲ್ಲೂ ಅವರು ಫೇಮಸ್. ಎಷ್ಟೇ ಬ್ಯುಸಿ ಇದ್ದರೂ ಅವರು ಜಿಮ್ನಲ್ಲಿ ವರ್ಕೌಟ್ ಮಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಡಯೆಟ್ ಬಗ್ಗೆಯೂ ಅವರು ಸಖತ್ ಕಾಳಜಿ ವಹಿಸುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ದಿಶಾ ಪಟಾನಿ ಸಖತ್ ಆ್ಯಕ್ಟೀವ್. ಅವರು ಬೋಲ್ಡ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಪಡ್ಡೆಗಳು ಹುಬ್ಬರಳಿಸಿದ್ದಾರೆ.

2015ರಲ್ಲಿ ತೆಲುಗಿನ ‘ಲೋಫರ್’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ದಿಶಾ ಪಟಾನಿ ಕಾಲಿಟ್ಟರು. ನಂತರ ಅವರು ನಟಿಸಿದ ‘ಎಂ.ಎಸ್. ಧೋನಿ: ದಿ ಅನ್ಟೋಲ್ಡ್ ಸ್ಟೋರಿ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದರು. ಈಗ ಅವರ ಕೈಯಲ್ಲಿ ಹಲವು ಪ್ರಾಜೆಕ್ಟ್ಗಳಿವೆ.

ಇನ್ಸ್ಟಾಗ್ರಾಮ್ನಲ್ಲಿ ದಿಶಾ ಪಟಾನಿ ಅವರನ್ನು 5 ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹಲವು ಬಗೆಯ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ.