AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಹಂಸಲೇಖ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಮೈಸೂರು ದಸರಾಗೆ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾಡಳಿತ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆ ದಸರಾಗೆ ಆಗಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್ ಮತ್ತು ಡಿಸಿ ಡಾ.ರಾಜೇಂದ್ರರಿಂದ ಹಂಸಲೇಖ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ರಾಮ್​, ಮೈಸೂರು
| Edited By: |

Updated on:Oct 13, 2023 | 12:47 PM

Share
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆ ದಸರಾಗೆ ಆಗಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್ ಮತ್ತು
ಡಿಸಿ ಡಾ.ರಾಜೇಂದ್ರರಿಂದ ಹಲವು ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆ ದಸರಾಗೆ ಆಗಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್ ಮತ್ತು ಡಿಸಿ ಡಾ.ರಾಜೇಂದ್ರರಿಂದ ಹಲವು ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

1 / 5
ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, 
ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ್ದಾರೆ.

ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ್ದಾರೆ.

2 / 5
ಮೈಸೂರು ದಸರಾ ಉದ್ಘಾಟಕ ನಾದಬ್ರಹ್ಮ ಹಂಸಲೇಖ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ಪತ್ರಿಕೆ ನೀಡಲಾಗಿದೆ. 
ಮೈಸೂರು ಪೇಟ ತೊಡಿಸಿ ದಸರಾ ಜಂಬೂಸವಾರಿ ಮರದ ಆನೆ ನೀಡುವ ಮೂಲಕ ಮೈಸೂರು ಜಿಲ್ಲಾಡಳಿತ ದಸರಾಗೆ ಆಹ್ವಾನ ನೀಡಿದೆ.

ಮೈಸೂರು ದಸರಾ ಉದ್ಘಾಟಕ ನಾದಬ್ರಹ್ಮ ಹಂಸಲೇಖ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ಪತ್ರಿಕೆ ನೀಡಲಾಗಿದೆ. ಮೈಸೂರು ಪೇಟ ತೊಡಿಸಿ ದಸರಾ ಜಂಬೂಸವಾರಿ ಮರದ ಆನೆ ನೀಡುವ ಮೂಲಕ ಮೈಸೂರು ಜಿಲ್ಲಾಡಳಿತ ದಸರಾಗೆ ಆಹ್ವಾನ ನೀಡಿದೆ.

3 / 5
ಮೈಸೂರು ದಸರಾ ಉದ್ಘಾಟನೆ ಆಗಮಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ,
ಮೈಸೂರು ಪೊಲೀಸ್ ಆಯುಕ್ತ ಶ್ರೀ ಬಿ. ರಮೇಶ್ ಅವರು ಆಹ್ವಾನ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಹಿತಿ ನೀಡಿರುವ 
ಡಿಕೆ ಶಿವಕುಮಾರ್​, ಮೈಸೂರು ದಸರಾ ಎಂದರೆ ಕರ್ನಾಟಕದ ಸಂಸ್ಕೃತಿಯ ಸಮಾಗಮ. ನಾಡ ದೇವತೆ, ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು 
ಆರಾಧಿಸುವ ಸುಸಂದರ್ಭ. ಚಿಕ್ಕಂದಿನಲ್ಲಿ ಕುಟುಂಬದವರ ಜೊತೆ ನೋಡಿದ ದಸರಾ ಕಣ್ಣ ಮುಂದಿದೆ. ಇಂದು ಅದೇ ಮೈಸೂರು ದಸರಾ ಉದ್ಘಾಟನೆಗೆ 
ಬರುವಂತೆ ಆಹ್ವಾನಿಸಿದ್ದಾರೆ. ಇದು ಒಂದು ಹೆಮ್ಮೆಯ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಮೈಸೂರು ದಸರಾ ಉದ್ಘಾಟನೆ ಆಗಮಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮೈಸೂರು ಪೊಲೀಸ್ ಆಯುಕ್ತ ಶ್ರೀ ಬಿ. ರಮೇಶ್ ಅವರು ಆಹ್ವಾನ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಹಿತಿ ನೀಡಿರುವ ಡಿಕೆ ಶಿವಕುಮಾರ್​, ಮೈಸೂರು ದಸರಾ ಎಂದರೆ ಕರ್ನಾಟಕದ ಸಂಸ್ಕೃತಿಯ ಸಮಾಗಮ. ನಾಡ ದೇವತೆ, ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಆರಾಧಿಸುವ ಸುಸಂದರ್ಭ. ಚಿಕ್ಕಂದಿನಲ್ಲಿ ಕುಟುಂಬದವರ ಜೊತೆ ನೋಡಿದ ದಸರಾ ಕಣ್ಣ ಮುಂದಿದೆ. ಇಂದು ಅದೇ ಮೈಸೂರು ದಸರಾ ಉದ್ಘಾಟನೆಗೆ ಬರುವಂತೆ ಆಹ್ವಾನಿಸಿದ್ದಾರೆ. ಇದು ಒಂದು ಹೆಮ್ಮೆಯ ಕ್ಷಣ ಎಂದು ಬರೆದುಕೊಂಡಿದ್ದಾರೆ.

4 / 5
ರಾಜಭವನದಲ್ಲಿ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ರನ್ನು ಭೇಟಿ ಆದ ಮೈಸೂರು ಜಿಲ್ಲಾ 
ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್​ ಮತ್ತು ಡಿಸಿ ಡಾ.ರಾಜೇಂದ್ರರಿಂದ ಮೈಸೂರು 
ದಸರಾಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ರಾಜಭವನದಲ್ಲಿ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ರನ್ನು ಭೇಟಿ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್​ ಮತ್ತು ಡಿಸಿ ಡಾ.ರಾಜೇಂದ್ರರಿಂದ ಮೈಸೂರು ದಸರಾಗೆ ಅಧಿಕೃತ ಆಹ್ವಾನ ನೀಡಲಾಗಿದೆ.

5 / 5

Published On - 9:48 pm, Wed, 11 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ